Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ ಶುಕ್ರವಾರ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಡಿ.ಕೆಂಪಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಮಲ್ಲೇಶಪ್ಪ ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ನಲವತ್ತು ಪರ್ಸೆಂಟ್ ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿ ಪ್ರಧಾನಿ ಮೋದಿಗೆ ಪತ್ರ ಬರೆದು ರಾಷ್ಟ್ರದ ಗಮನ ಸಳೆದಿದ್ದ ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ದ ಹೋರಾಡಿದರು. ಸಣ್ಣಪುಟ್ಟ ಗುತ್ತಿಗೆದಾರರ ಜೊತೆಗೂ ಉತ್ತಮ ಒಡನಾಟವಿಟ್ಟುಕೊಂಡಿದ್ದ ಅವರ ನಿಧನದಿಂದ ಗುತ್ತಿಗೆದಾರರ ಸಂಘಕ್ಕೆ ಅಪಾರ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಅಜಯ್, ಉಪಾಧ್ಯಕ್ಷರುಗಳಾದ ಮಹೇಶ್, ಕರಿಯಪ್ಪ, ಜಂಟಿ ಕಾರ್ಯದರ್ಶಿ ಮೈಲಾರಪ್ಪ ಇನ್ನು ಅನೇಕರು ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...