ಶಿಕ್ಷಕ ಮತ್ತು ಪದವೀಧರ ವಿಭಾಗ ಹೊಸದುರ್ಗ ಬ್ಲಾಕ್ ಅಧ್ಯಕ್ಷರಾಗಿ ಡಿ.ಖಲಂದರ್ ನೇಮಕ

suddionenews
1 Min Read

ಚಿತ್ರದುರ್ಗ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರ ಹಾಗೂ ಪದವೀಧರರ ವಿಭಾಗದ ರಾಜ್ಯಾಧ್ಯಕ್ಷರಾದ ಡಾ.ಆರ್.ಎಂ.ಕುಬೇಂದ್ರಪ್ಪರವರ ಆದೇಶದಂತೆ ಶಿಕ್ಷಕರು ಹಾಗೂ ಪದವೀಧರ ವಿಭಾಗದ ಹೊಸದುರ್ಗ ಬ್ಲಾಕ್ ಅಧ್ಯಕ್ಷರನ್ನಾಗಿ ಡಿ.ಖಲಂದರ್‍ರವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪಕ್ಷದ ಕಚೇರಿಯಲ್ಲಿ ಸೋಮವಾರ ಡಿ.ಖಲಂದರ್‍ಗೆ ನೇಮಕಾತಿ ಪತ್ರ ನೀಡಿ ಮಾತನಾಡುತ್ತ ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಪಡೆದುಕೊಂಡು ಸುಮ್ಮನೆ ಕೂರಬಾರದು, ಹೊಸದುರ್ಗ ತಾಲ್ಲೂಕಿನಾದ್ಯಂತ ಸಂಚರಿಸಿ ಶಿಕ್ಷಕರು ಮತ್ತು ಪದವೀಧರರನ್ನು ಹೆಚ್ಚು ಪಕ್ಷಕ್ಕೆ ಸೇರ್ಪಡೆಗೊಳಿಸಿ ತಳಮಟ್ಟದಿಂದ ಪಕ್ಷ ಸಂಘಟನೆಯಲ್ಲಿ ತೊಡಗಬೇಕೆಂದು ತಿಳಿಸಿದರು.

139 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಡವರಿಗೆ ನೀಡಿದ ಜನಪರ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಿಳಿಸಿ ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಡಿ.ಖಲಂದರ್‍ಗೆ ಸೂಚಿಸಿದರು.
ಜಿಲ್ಲಾ ಕಾಂಗ್ರೆಸ್ ಶಿಕ್ಷಕ ಮತ್ತು ಪದವೀಧರ ವಿಭಾಗದ ಜಿಲ್ಲಾಧ್ಯಕ್ಷ ಮುದಸಿರ್‍ನವಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷ ಹೆಚ್.ಅಂಜಿನಪ್ಪ, ಎ.ಸಾಧಿಕ್‍ವುಲ್ಲಾ, ಜಮೀರ್‍ಖಾನ್ ಈ ಸಂದರ್ಭದಲ್ಲಿ ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *