ಬೆಂಗಳೂರು: IPS ಅಧಿಕಾರಿ ಡಿ ರೂಪಾ ಹಾಗೂ IAS ಅಧಿಕಾರಿ ರೋಹಿಣಿ ಸಿಂಧೂರಿ ಜಗಳ ನಿಲ್ಲುವಂತೆ ಕಾಣುತ್ತಿಲ್ಲ. ರೋಹಿಣಿ ಸಿಂಧೂರಿ ಮತ್ತೆ ಕೋರ್ಟ್ ಮೊರೆ ಹೋಗಿದ್ದಾರೆ. ಐಪಿಎಸ್ ಆಫೀಸರ್ ರೂಪಾ ಅವರ ವಿರುದ್ಧ ದೂರು ನೀಡಿದ್ದಾರೆ.
ರೋಹಿಣಿ ಸಿಂಧೂರಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿಯೇ ಹೌಹಾರಿದ್ದ ಡಿ ರೂಪಾ, ಅವರ ಖಾಸಗಿ ಫೋಟೋಗಳನ್ನು ಹಾಕಿದ್ದರು. ಜೊತೆಗೆ ನಂಬರ್ ಕೂಡ ಹಂಚಿಕೊಂಡಿದ್ದರು. ಇದರ ವಿಚಾರವಾಗಿ ರೋಹಿಣಿ ಸಿಂಧೂರಿ ಕೋರ್ಟ್ ಮೊರೆ ಹೋಗಿದ್ದಾರೆ.
24ನೇ ಎಸಿಎಂಎಂ ಕೋರ್ಟ್ ನಲ್ಲಿ ಕ್ರಿಮಿನಲ್ ಕೇಸ್ ಹಾಕಿದ್ದಾರೆ. ರೋಹಿಣಿ ಸಿಂಧೂರಿ ಅವರ ಅರ್ಜಿ ಸ್ವೀಕರಿಸಿರುವ ಕೋರ್ಟ್, ವಿಚಾರಣೆಯನ್ನು ಮಾರ್ಚ್ 3ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಕೋರ್ಟ್ ನಲ್ಲಿ ಹೇಳಿಕೆ ನೀಡಿರುವ ರೋಹಿಣಿ, ಸೋಷಿಯಲ್ ಮೀಡಿಯಾದಲ್ಲಿ ನನ್ನ ವಿರುದ್ಧ ಪದೇ ಪದೇ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಕೋರ್ಟ್ ನಿಂದ ತಡೆಯಾಜ್ಞೆ ಇದ್ದರು ಕೂಡ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇನೆ. ಸೋಷಿಯಲ್ ಮೀಡಿಯಾದಲ್ಲಿ ನನ್ನ ಫೋನ್ ನಂಬರ್ ಸಮೇತ ಹಾಕಿದ್ದಾರೆ. ಹೀಗಾಗಿ ಆ ನಂಬರ್ ಸಾಕಷ್ಟು ಕರೆಗಳು ಬರುತ್ತಿವೆ ಎಂದಿದ್ದಾರೆ.