Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

DA HIKE : ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ ; ಡಿಎ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

Facebook
Twitter
Telegram
WhatsApp

 

ಸುದ್ದಿಒನ್, ನವದೆಹಲಿ, ಅಕ್ಟೋಬರ್.18 : ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಮತ್ತೊಮ್ಮೆ ಸಿಹಿಸುದ್ದಿ ನೀಡಿದೆ. ದಸರಾ ಹಾಗೂ ದೀಪಾವಳಿ ಹಬ್ಬಕ್ಕೂ ಮುನ್ನವೇ ಸರ್ಕಾರದಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ.

ಅಕ್ಟೋಬರ್ 18 (ಬುಧವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಮತ್ತೆ ಶೇ.4ರಷ್ಟು ಹೆಚ್ಚಿಸಲು ಅನುಮೋದನೆ ನೀಡಿದೆ. ಈ ಹೆಚ್ಚಳದಿಂದ ಇದುವರೆಗೆ ಶೇ.42ರಷ್ಟಿದ್ದ ಕೇಂದ್ರ ಸರ್ಕಾರಿ ನೌಕರರ ಡಿಎ ಶೇ.46ಕ್ಕೆ ಏರಿಕೆಯಾಗಲಿದೆ. ಈ ಡಿಎ ಹೆಚ್ಚಳ ಜುಲೈ 1 ರಿಂದ ಜಾರಿಗೆ ಬರಲಿದೆ.

ಏಳನೇ ವೇತನ ಆಯೋಗದ ಶಿಫಾರಸ್ಸಿನಂತೆ ಡಿಎ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ಡಿಎ ಹೆಚ್ಚಳ ನಿರ್ಧಾರದಿಂದ 48.67 ಲಕ್ಷ ಸರ್ಕಾರಿ ನೌಕರರು ಮತ್ತು 67.95 ಲಕ್ಷ ಸರ್ಕಾರಿ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. ಅಂದರೆ, ಈ ಡಿಎ ಹೆಚ್ಚಳದಿಂದ ಸುಮಾರು 1.1 ಕೋಟಿ ಜನರು ಪ್ರಯೋಜನ ಪಡೆಯಲಿದ್ದಾರೆ. ಈ ಡಿಎ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ರೂ. 12,867 ಕೋಟಿ ಹೊರೆಯಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!