Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕೃಷಿ ಮಾರ್ಗಗಳಿಗೆ ನಿತ್ಯ 5 ಗಂಟೆಗಳ ವಿದ್ಯುತ್ : ಬೆಸ್ಕಾಂ ಎಂ.ಡಿ. ಮಹಾಂತೇಶ ಬೀಳಗಿ ಭರವಸೆ

---Advertisement---

 

ಚಿತ್ರದುರ್ಗ, (ಅ.16) :‌ ಜಿಲ್ಲೆಯ ಎಲ್ಲಾ ಕೃಷಿ ಮಾರ್ಗಗಳಿಗೆ ಪ್ರತಿದಿನ 5 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುವುದಾಗಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ರೈತರಿಗೆ ಭರವಸೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ  ಪ್ರಸ್ತುತ ಕೃಷಿ ಮಾರ್ಗಗಳಿಗೆ ವಿದ್ಯುತ್ ಸರಬರಾಜು  ನೀಡುವ ಸಮಯವನ್ನು ಹಾಗೂ ಇತರೆ ವಿಷಯಗಳನ್ನು  ಚರ್ಚಿಸುವ ಸಂಬಂಧ ಬೆಸ್ಕಾಂ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಸಂಜೆಯ ವೇಳೆಯಲ್ಲಿ ಕೃಷಿಯ ಮಾರ್ಗಗಳಲ್ಲಿ ಬರುವ ತೋಟದ ಮನೆಗಳಿಗೆ ಲೈಂಟಿಗ್ ವ್ಯವಸ್ಥೆಗಾಗಿ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಸಿಂಗಲ್ ಫೇಸ್ ವಿದ್ಯುತ್ ನೀಡುವುದಾಗಿ ತಿಳಿಸಿದರು.

ಸಿಂಗಲ್ ಫೇಸ್ ಅವಧಿಯಲ್ಲಿ ಯಾವುದೇ ಕಾರಣಕ್ಕೂ ತೋಟದ ಮನೆಯ ದೀಪದ ಬಳಕೆಯನ್ನು ಹೊರತುಪಡಿಸಿ ಯಾವುದೇ ಪಂಪ್ ಸೆಟ್ ಗಳನ್ನು ಬಳಸಬಾರದು ಎಂದು ಸೂಚಿಸಿದರು.

ವಿಫಲವಾದ ಪರಿವರ್ತಕಗಳನ್ನು ನಿಗಧಿತ ಅವಧಿಯಲ್ಲಿ ಬದಲಾಯಿಸಲು ಮತ್ತು 11 ಕೆವಿ ಮತ್ತು ಎಲ್.ಟಿ ಮಾರ್ಗಗಳಿಗೆ ಅಡಚಣೆಯಾಗುವ ಮರಗಿಡಗಳನ್ನು ತೆರವು ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಎಲ್ಲಾ ರೈತ ಮುಖಂಡರಿಗೆ ಹಾಲಿ ವಿದ್ಯುತ್ ವ್ಯವಸ್ಥೆಯ ಬಗ್ಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಕೋರಿದರು.

ಸಭೆಯಲ್ಲಿ ಬೆಸ್ಕಾಂ ನಿರ್ದೇಶಕ ಹೆಚ್.ಜೆ.ರಮೇಶ್, ಚಿತ್ರದುರ್ಗ ವಲಯ ಮುಖ್ಯ ಇಂಜಿನಿಯರ್ ಗೋವಿಂದಪ್ಪ, ದಾವಣಗೆರೆ ಅಧೀಕ್ಷಕ ಇಂಜಿನಿಯರ್ ಬಿ.ಎಸ್.ಜಗದೀಶ್, ಕೆಪಿಟಿಸಿ ಎಲ್ ಮತ್ತು  ಬೆಸ್ಕಾಂ ಅಧಿಕಾರಿಗಳು, ರೈತ ಮುಖಂಡರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...