ಚಿತ್ರದುರ್ಗ, (ಅ.16) : ಜಿಲ್ಲೆಯ ಎಲ್ಲಾ ಕೃಷಿ ಮಾರ್ಗಗಳಿಗೆ ಪ್ರತಿದಿನ 5 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುವುದಾಗಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ರೈತರಿಗೆ ಭರವಸೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಸ್ತುತ ಕೃಷಿ ಮಾರ್ಗಗಳಿಗೆ ವಿದ್ಯುತ್ ಸರಬರಾಜು ನೀಡುವ ಸಮಯವನ್ನು ಹಾಗೂ ಇತರೆ ವಿಷಯಗಳನ್ನು ಚರ್ಚಿಸುವ ಸಂಬಂಧ ಬೆಸ್ಕಾಂ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ಸಂಜೆಯ ವೇಳೆಯಲ್ಲಿ ಕೃಷಿಯ ಮಾರ್ಗಗಳಲ್ಲಿ ಬರುವ ತೋಟದ ಮನೆಗಳಿಗೆ ಲೈಂಟಿಗ್ ವ್ಯವಸ್ಥೆಗಾಗಿ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಸಿಂಗಲ್ ಫೇಸ್ ವಿದ್ಯುತ್ ನೀಡುವುದಾಗಿ ತಿಳಿಸಿದರು.
ಸಿಂಗಲ್ ಫೇಸ್ ಅವಧಿಯಲ್ಲಿ ಯಾವುದೇ ಕಾರಣಕ್ಕೂ ತೋಟದ ಮನೆಯ ದೀಪದ ಬಳಕೆಯನ್ನು ಹೊರತುಪಡಿಸಿ ಯಾವುದೇ ಪಂಪ್ ಸೆಟ್ ಗಳನ್ನು ಬಳಸಬಾರದು ಎಂದು ಸೂಚಿಸಿದರು.
ವಿಫಲವಾದ ಪರಿವರ್ತಕಗಳನ್ನು ನಿಗಧಿತ ಅವಧಿಯಲ್ಲಿ ಬದಲಾಯಿಸಲು ಮತ್ತು 11 ಕೆವಿ ಮತ್ತು ಎಲ್.ಟಿ ಮಾರ್ಗಗಳಿಗೆ ಅಡಚಣೆಯಾಗುವ ಮರಗಿಡಗಳನ್ನು ತೆರವು ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಎಲ್ಲಾ ರೈತ ಮುಖಂಡರಿಗೆ ಹಾಲಿ ವಿದ್ಯುತ್ ವ್ಯವಸ್ಥೆಯ ಬಗ್ಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಕೋರಿದರು.
ಸಭೆಯಲ್ಲಿ ಬೆಸ್ಕಾಂ ನಿರ್ದೇಶಕ ಹೆಚ್.ಜೆ.ರಮೇಶ್, ಚಿತ್ರದುರ್ಗ ವಲಯ ಮುಖ್ಯ ಇಂಜಿನಿಯರ್ ಗೋವಿಂದಪ್ಪ, ದಾವಣಗೆರೆ ಅಧೀಕ್ಷಕ ಇಂಜಿನಿಯರ್ ಬಿ.ಎಸ್.ಜಗದೀಶ್, ಕೆಪಿಟಿಸಿ ಎಲ್ ಮತ್ತು ಬೆಸ್ಕಾಂ ಅಧಿಕಾರಿಗಳು, ರೈತ ಮುಖಂಡರು ಇದ್ದರು.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…