Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೃಷಿ ಪಂಪ್‍ಸೆಟ್ ಮಾರ್ಗಗಳಿಗೆ ಪ್ರತಿದಿನ 5 ಗಂಟೆಗಳ ವಿದ್ಯುತ್ : ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೂಚನೆ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

 

ಚಿತ್ರದುರ್ಗ. ಅ.26: ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ರೈತರ ಬೇಡಿಕೆಗೆ ಅನುಗುಣವಾಗಿ ಪ್ರತಿದಿನ ನಿರಂತರವಾಗಿ 5 ಗಂಟೆ ಅಥವಾ ಹಗಲು ಪಾಳಿಯಲ್ಲಿ 3 ಗಂಟೆ ಮತ್ತು ರಾತ್ರಿ ಪಾಳಿಯಲ್ಲಿ 2 ಗಂಟೆಗಳಂತೆ ಪ್ರತಿದಿನ 05 ಗಂಟೆಗಳ ವಿದ್ಯುತ್ ಅನ್ನು ಕೃಷಿ ಪಂಪ್‍ಸೆಟ್ ಮಾರ್ಗಗಳಿಗೆ ಒದಗಿಸಲಾಗುತ್ತಿದೆ ಎಂದು ಬೆಸ್ಕಾಂ ದಾವಣಗೆರೆ ಅಧೀಕ್ಷಕ ಇಂಜಿನಿಯರ್ ಬಿ.ಎಸ್.ಜಗದೀಶ್ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 375 ಕೃಷಿ ಪಂಪ್‍ಸೆಟ್ ಮಾರ್ಗಗಳಿದ್ದು, ಈ ನೀರಾವರಿ ಮಾರ್ಗಗಳಿಗೆ ಪ್ರತಿದಿನ 5  ಗಂಟೆಗಳ ನಿರಂತರ ವಿದ್ಯುತ್ ಒದಗಿಸಲು ಸರ್ಕಾರದಿಂದ ಆದೇಶವಾಗಿರುವ ಮೇರೆಗೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಶಾಸಕರು ಮತ್ತು ರೈತ ಸಂಘಟನೆಗಳ ಜೊತೆ ಈಗಾಗಲೆ ಸಮಾಲೋಚನೆ ನಡೆಸಲಾಗಿದ್ದು,  ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ರೈತರ ಬೇಡಿಕೆಗೆ ಅನುಗುಣವಾಗಿ ಪ್ರತಿದಿನ ನಿರಂತರವಾಗಿ 5 ಗಂಟೆ ಅಥವಾ ಹಗಲು ಪಾಳಿಯಲ್ಲಿ 3 ಗಂಟೆ ಮತ್ತು ರಾತ್ರಿ ಪಾಳಿಯಲ್ಲಿ 2 ಗಂಟೆಗಳಂತೆ ಪ್ರತಿದಿನ 5 ಗಂಟೆಗಳ ವಿದ್ಯುತ್ ಅನ್ನು ಕೃಷಿ ಪಂಪ್‍ಸೆಟ್ ಮಾರ್ಗಗಳಿಗೆ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರನ್ನು ಬೆಂಗಳೂರಿನಲ್ಲಿ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದು, ಸರ್ಕಾರದ ನಿರ್ದೇಶನವನ್ನು ಪಾಲಿಸುವಂತೆ ತಿಳಿಸಿರುತ್ತಾರೆ.  ಬೆಸ್ಕಾಂ ಚಿತ್ರದುರ್ಗ ವಲಯ ಮುಖ್ಯ ಇಂಜಿನಿಯರ್ ಕೆ.ವಿ.ಗೋವಿಂದಪ್ಪ, ಕಾರ್ಯನಿರ್ವಾಹಕ ಇಂಜಿನಿಯರ್‍ಗಳಾದ ಡಿ.ಜಯಣ್ಣ, ರಾಮಚಂದ್ರ ಸುತಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment