Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಕ್ಷಿಣ ಕನ್ನಡ : 5 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ!

---Advertisement---

ದಕ್ಷಿಣ ಕನ್ನಡ.ಜೂನ್.24 :ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿದ್ದ ಅತ್ಯಂತ ಕ್ರೂರ ಹಾಗೂ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದ್ದು, ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಕೇವಲ ಐದು ವರ್ಷದ ಹಸುಳೆಯ ಮೇಲೆ ಇಬ್ಬರು ಅಪ್ರಾಪ್ತ ಹುಡುಗರು ಸಾಮೂಹಿಕ ಅತ್ಯಾಚಾರ ಎಸಗಿರುವ ಘೋರ ಕೃತ್ಯವೊಂದು ಇತ್ತೀಚೆಗೆ ಸಾರ್ವಜನಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸುಮಾರು ಮೂರು ವರ್ಷಗಳ ಹಿಂದೆ ಯಾರಿಗೂ ತಿಳಿಯದಂತೆ ಮುಚ್ಚಿಹೋಗಿದ್ದ ಈ ಇಡೀ ಪ್ರಕರಣ ಇತ್ತೀಚೆಗೆ ಹೊರಬಂದ ವಿಡಿಯೋ ಕ್ಲಿಪ್ನಿಂದಾಗಿ ಸ್ಫೋಟಗೊಂಡಿದೆ. ಕಾಮುಕರು ತಾವು ಎಸಗಿದ ಈ ಪೈಶಾಚಿಕ ಕೃತ್ಯವನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಈ ವಿಡಿಯೋ ಕ್ಲಿಪ್ ಇತ್ತೀಚೆಗೆ ಸಾಮಾಜಿಕ ವಲಯದಲ್ಲಿ ಹಾಗೂ ಸಾರ್ವಜನಿಕರ ಕೈಸೇರುತ್ತಿದ್ದಂತೆ ಇಡೀ ಸಮಾಜ ತಲೆತಗ್ಗಿಸುವಂತಾಗಿದೆ.

ವಿಷಯ ತಿಳಿದು ಆಘಾತಕ್ಕೊಳಗಾದ ಮಗುವಿನ ಹೆತ್ತವರು ಕೂಡಲೇ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಘಟನೆ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.

Join WhatsApp

Join Now

Join Telegram

Join Now