Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿಯಲ್ಲಿ ದಲಿತ ಸಮಾವೇಶ : ಸಚಿವ ಕೆ.ಎನ್.ರಾಜಣ್ಣ ಮಾಹಿತಿ

---Advertisement---

 

ದೆಹಲಿ: ಸಚಿವ ಕೆ.ಎನ್.ರಾಜಣ್ಣ ಹಾಸನ ಜಿಲ್ಲಾ ಉಸ್ತುವಾರಿಯಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ಈಗ ಆ ಉಸ್ತುವಾರಿಯಿಂದ ಹಿಂದೆ ಸರಿಯುವುದಕ್ಕೆ ನಿರ್ಧಾರ ಮಾಡಿದ್ದಾರೆ. ಈ ಸಂಬಂಧ ಈಗಾಗಲೇ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಕೂಡ ಬರೆದಿದ್ದಾರೆ.

ಈ ಸಂಬಂಧ ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರಾಜಣ್ಣ ಅವರು, ಹಾಸನ ಉಸ್ತುವಾರಿಯಿಂದ ಬಿಡುಗಡೆ ಕೋರಿ ಪತ್ರ ಬರೆದಿದ್ದೇನೆ. ನನ್ನ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ. ಹೀಗಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕೆಲಸ ಮಾಡಬೇಕಿದೆ‌. ನಾನು ಯಾವ ಜಿಲ್ಲೆಗೂ ಉಸ್ತುವಾರಿ ಕೊಡಿ ಎಂದು ಕೇಳುವುದಿಲ್ಲ ಎಂದಿದ್ದಾರೆ.

ಇನ್ನು ಬಹಳ ಮುಖ್ಯವಾಗಿ ದಲಿತ ನಾಯಕರ ಪ್ರತ್ಯೇಕ ಸಭೆಯನ್ನು ಈಗಾಗಲೇ ಪ್ಲ್ಯಾನ್ ಮಾಡಿದ್ದರು. ಹೈಕಮಾಂಡ್ ನಾಯಕರ ಮಾತಿನಿಂದ ಸದ್ಯಕ್ಕೆ ಸಭೆಯನ್ನು ಮುಂದೂಡಿದ್ದಾರೆ. ಈಗ ಆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ.ಎನ್.ರಾಜಣ್ಣ, ದಲಿತ ಸಚಿವರಿಂದ ಪ್ರತ್ಯೇಕ ಸಮಾವೇಶದ ಅಗತ್ಯವನ್ನು ನಾಯಕರ ಗಮನಕ್ಕೆ ತಂದಿದ್ದೇವೆ. ನಾನು ಎಸ್ ಟಿ ಸಮುದಾಯಗಳ ಮತದಿಂದ ಮಾತ್ರ ಗೆದ್ದಿಲ್ಲ. ಎಲ್ಲಾ ಸಮುದಾಯದ ಆಶೀರ್ವಾದ ಬೇಕು. ಕಾಂಗ್ರೆಸ್ ಗೆ ಯಾವ ಸಮಾವೇಶ ಮಾಡಿದರೆ ಒಳ್ಳೆಯದೋ ಆ ಸಮಾವೇಶ ಮಾಡಬೇಕು. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬೆಲು ಜಾಗೃತಿ ಮೂಡಿಸಬೇಕಿದೆ. ಸಮಾವೇಶದ ಅಗತ್ಯವನ್ನು ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇವೆ. ಕೇಂದ್ರದ ನಾಯಕರನ್ನು ಸಮಾವೇಶಕ್ಕೆ ಕರೆಸುತ್ತೇವೆ. ಮುಂದಿನ ದಿನಗಳಲ್ಲಿ ಸಮಾವೇಶಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ಮಾಡುತ್ತೇವೆ. ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಯುತ್ತದೆ. ಪಕ್ಷ ಗಟ್ಟಿಯಾದರೆ ಸಿದ್ದರಾಮಯ್ಯನವರು ಇರುತ್ತಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...