ದೆಹಲಿ: ಸಚಿವ ಕೆ.ಎನ್.ರಾಜಣ್ಣ ಹಾಸನ ಜಿಲ್ಲಾ ಉಸ್ತುವಾರಿಯಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ಈಗ ಆ ಉಸ್ತುವಾರಿಯಿಂದ ಹಿಂದೆ ಸರಿಯುವುದಕ್ಕೆ ನಿರ್ಧಾರ ಮಾಡಿದ್ದಾರೆ. ಈ ಸಂಬಂಧ ಈಗಾಗಲೇ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಕೂಡ ಬರೆದಿದ್ದಾರೆ.
ಈ ಸಂಬಂಧ ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರಾಜಣ್ಣ ಅವರು, ಹಾಸನ ಉಸ್ತುವಾರಿಯಿಂದ ಬಿಡುಗಡೆ ಕೋರಿ ಪತ್ರ ಬರೆದಿದ್ದೇನೆ. ನನ್ನ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ. ಹೀಗಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕೆಲಸ ಮಾಡಬೇಕಿದೆ. ನಾನು ಯಾವ ಜಿಲ್ಲೆಗೂ ಉಸ್ತುವಾರಿ ಕೊಡಿ ಎಂದು ಕೇಳುವುದಿಲ್ಲ ಎಂದಿದ್ದಾರೆ.
ಇನ್ನು ಬಹಳ ಮುಖ್ಯವಾಗಿ ದಲಿತ ನಾಯಕರ ಪ್ರತ್ಯೇಕ ಸಭೆಯನ್ನು ಈಗಾಗಲೇ ಪ್ಲ್ಯಾನ್ ಮಾಡಿದ್ದರು. ಹೈಕಮಾಂಡ್ ನಾಯಕರ ಮಾತಿನಿಂದ ಸದ್ಯಕ್ಕೆ ಸಭೆಯನ್ನು ಮುಂದೂಡಿದ್ದಾರೆ. ಈಗ ಆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ.ಎನ್.ರಾಜಣ್ಣ, ದಲಿತ ಸಚಿವರಿಂದ ಪ್ರತ್ಯೇಕ ಸಮಾವೇಶದ ಅಗತ್ಯವನ್ನು ನಾಯಕರ ಗಮನಕ್ಕೆ ತಂದಿದ್ದೇವೆ. ನಾನು ಎಸ್ ಟಿ ಸಮುದಾಯಗಳ ಮತದಿಂದ ಮಾತ್ರ ಗೆದ್ದಿಲ್ಲ. ಎಲ್ಲಾ ಸಮುದಾಯದ ಆಶೀರ್ವಾದ ಬೇಕು. ಕಾಂಗ್ರೆಸ್ ಗೆ ಯಾವ ಸಮಾವೇಶ ಮಾಡಿದರೆ ಒಳ್ಳೆಯದೋ ಆ ಸಮಾವೇಶ ಮಾಡಬೇಕು. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬೆಲು ಜಾಗೃತಿ ಮೂಡಿಸಬೇಕಿದೆ. ಸಮಾವೇಶದ ಅಗತ್ಯವನ್ನು ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇವೆ. ಕೇಂದ್ರದ ನಾಯಕರನ್ನು ಸಮಾವೇಶಕ್ಕೆ ಕರೆಸುತ್ತೇವೆ. ಮುಂದಿನ ದಿನಗಳಲ್ಲಿ ಸಮಾವೇಶಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ಮಾಡುತ್ತೇವೆ. ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಯುತ್ತದೆ. ಪಕ್ಷ ಗಟ್ಟಿಯಾದರೆ ಸಿದ್ದರಾಮಯ್ಯನವರು ಇರುತ್ತಾರೆ ಎಂದಿದ್ದಾರೆ.
ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…
ಸುದ್ದಿಒನ್, ಜಗಳೂರು, ಮಾರ್ಚ್. 14 : ಶ್ರೀ ಶರಣ ಬಸವೇಶ್ವರ ದಾಸೋಹ ಮಠ, ದೊಣ್ಣೆಹಳ್ಳಿ, ಸರ್ಕಾರಿ ದಂತ ಕಾಲೇಜು…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಚಿತ್ರದುರ್ಗ. ಮಾ.14: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ…
ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 14: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)…