ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ತಡೆಹಿಡಿಯಲಾಗಿತ್ತು. ಆದರೆ ಬಿಜೆಪಿ ನಾಯಕರು ನವೆಂಬರ್ 2ರಂದು ಚಿತ್ತಾಪುರದಲ್ಲಿಯೇ ಪಥ ಸಂಚಲನ ನಡೆಸುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಬೆನ್ನಲ್ಲೇ ನವೆಂಬರ್ 2 ರಂದೇ ದಲಿತ ಸಂಘಟನೆಯ ರ್ಯಾಲಿಯನ್ನು ನಡೆಸಲಾಗುತ್ತಿದೆ. ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.
ಸಂವಿಧಾನ ನಿರ್ಮಾತೃ ಬಾಬ ಸಾಹೇಬ್ ಅಂಬೇಡ್ಕರ್ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡ್ತಾ ಇದ್ದಾರೆ. ಅದನ್ನ ನಾವೂ ಸ್ವಾಗತಿಸುತ್ತೇವೆ. ಎರಡು ರ್ಯಾಲಿ ಒಂದೇ ದಿನ ನಡೆದರು ಸಹ ಜಿಲ್ಲಾಡಳಿತ ಅದರ ಬಗ್ಗೆ ನಿರ್ಧಾ ಮಾಡಬೇಕಾಗುತ್ತದೆ. ಜಿಲ್ಲಾಡಳಿತದ ನಿರ್ಧಾರದಂತೆ ನಡೆದುಕೊಳ್ಳುತ್ತೇವೆ. ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಬೇಕು. ಎಲ್ಲಾ ಸಂಘಗಳಿಗೂ ತಮ್ಮದೇ ಆದ ಸ್ವಾತಂತ್ರ್ಯ ಇರುತ್ತದೆ. ಸಚಿವರ ಬಗ್ಗೆ ನಾನು ಮಾತನಾಡುವುದೇ ಇಲ್ಲ. ಮೊನ್ನೆನೂ ಕೂಡ ಹೇಳಿದ್ದೆ. ಅವರು ಪ್ರಚಾರ ಪಡೆಯುವ ಸಲುವಾಗಿ ಈ ರೀತಿಯ ಹೇಳಿಕೆಯನ್ನ ಕೊಡ್ತಾ ಇದ್ದಾರೆ. ಹೀಗಾಗಿ ಅದರ ಬಗ್ಗೆ ನಾನು ಮಾತನಾಡುವುದಿಲ್ಲ.
ಯಾರೇ ಆದರೂ ಸರಿ ಶಾಂತಿಯುತವಾಗಿ ಕಾರ್ಯಕ್ರಮ ಮಾಡಬಹುದು. ಭೀಮ್ ಆರ್ಮಿ ಕಾರ್ಯಕ್ರಮ ಮಾಡಿದರೆ ನಮ್ಮ ತಕರಾರು ಏನು ಇಲ್ಲ. ಅಂಬೇಡ್ಕರ್ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡ್ತಾ ಇದ್ದಾರೆ ಮಾಡಲಿ ಎಂದಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಪಡೆಯಬೇಕು ಎಂಬ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
