Connect with us

Hi, what are you looking for?

ಪ್ರಮುಖ ಸುದ್ದಿ

ಬಿಜೆಪಿಯಿಂದ ದಲಿತರ ವಿಭಜನೆ; ಕೆಪಿಸಿಸಿ ವಿಜಯಕುಮಾರ್

ಚಿತ್ರದುರ್ಗ :ನೆಹರು ಕುಟುಂಬ ಯಾರ ಮೇಲೂ ದ್ವೇಷ ಮಾಡಲಿಲ್ಲ. ಇಂತಹ ನಾಯಕರ ಆದರ್ಶಗಳನ್ನಿಟ್ಟುಕೊಂಡು ರಾಜಕಾರಣ ಮಾಡಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಕೋಆರ್ಡಿನೇಟರ್ ವಿಜಯಕುಮಾರ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಡಾ.ಬಾಬುಜಗಜೀವನರಾಂರವರ 114 ಜಯಂತಿಯಲ್ಲಿ ಮಾತನಾಡಿದರು.

ಕೋಮುವಾದಿ ಬಿಜೆಪಿಯವರು ಎಲ್ಲವನ್ನು ಖಾಸಗೀಕರಣಗೊಳಿಸಲು ಹೊರಟಿದ್ದಾರೆ. ಹಂತ ಹಂತವಾಗಿ ಮೀಸಲಾತಿ ತೆಗೆಯುವ ಹುನ್ನಾರ ನಡೆಯುತ್ತಿದೆ. ದಲಿತರನ್ನು ವಿಭಜನೆ ಮಾಡುತ್ತಿದ್ದಾರೆ. ಡಾ.ಬಾಬುಜಗಜೀವನರಾಂರವರು ಜ್ಞಾನ ಸಂಪಾದಿಸಿಕೊಂಡು ಜಾತಿ ಮೀರಿ ಬೆಳೆದವರು ಎಂದು ಸ್ಮರಿಸಿಕೊಂಡರು.

ಮನುವಾದಿಗಳ ಕೈಗೆ ಅಧಿಕಾರ ನೀಡಿದ್ದೇವೆ. ಸಂವಿಧಾನವನ್ನು ಎಳೆ ಎಳೆಯಾಗಿ ಕೀಳುತ್ತಿದ್ದಾರೆ. ನಾಯಕತ್ವ ಉಳಿಸಿಕೊಳ್ಳದಿದ್ದರೆ ಪಕ್ಷಕ್ಕೆ ಧಕ್ಕೆಯಾಗುತ್ತದೆ ಎಂದರು.

ಸೇವೆ ಮಾಡುವವರ ನಾಯಕತ್ವದ ಕೊರತೆ ನಿಜವಾಗಿಯೂ ಪಕ್ಷಕ್ಕಿಲ್ಲ. ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಕಾರ್ಯಕರ್ತರು ಪಕ್ಷಕ್ಕೆ ಬದ್ದರಾಗಿದ್ದಾಗ ಮಾತ್ರ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಡಿ.ರಾಜಪ್ಪ ಮಾತನಾಡಿ, ಸಂವಿಧಾನದಡಿ ದಲಿತರಿಗೆ ನೀಡಿರುವ ಮೀಸಲಾತಿಯನ್ನು ಕೋಮುವಾದಿ ಬಿಜೆಪಿ.ಸರ್ಕಾರ ಕಿತ್ತುಕೊಳ್ಳಲು ಹೊರಟಿರುವುದರ ವಿರುದ್ದ ಕಾರ್ಯಕರ್ತರು ಮತ್ತು ಮುಖಂಡರುಗಳು ಎಚ್ಚೆತ್ತುಕೊಂಡು ಮತ್ತೆ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ ಕುಮಾರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ರವಿಕುಮಾರ್, ಕುಡಾ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ನಜ್ಮತಾಜ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಮೋಕ್ಷರುದ್ರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಕಾನೂನು, ಮಾಹಿತಿ ಮತ್ತು ಹಕ್ಕುಗಳ ವಿಭಾಗದ ಜಿಲ್ಲಾಧ್ಯಕ್ಷ ನ್ಯಾಯವಾದಿ ಡಿ.ಎಸ್.ಸುರ್ದಶನ್, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ನ್ಯಾಯವಾದಿ ರವಿ, ಹೆಚ್.ಶಬ್ಬೀರ್‍ಭಾಷ, ಮುದಸೀರ್ ನವಾಜ್ ಇದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಮೋದಿ ನೇತೃತ್ವದ ಅಧಿಕಾರದಲ್ಲಿ ಬಡವರು, ದೀನ ದಲಿತರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ಆಹಾರ ಧಾನ್ಯಗಳ ಬೆಲೆ ಏರಿಕೆ ಜೊತೆಗೆ ಪೆಟ್ರೋಲ್, ಡೀಸೆಲ್ ಬೆಲೆ ನೂರು ರೂಪಾಯಿ ಗೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15): ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಸಿ ಜನಸಾಮಾನ್ಯರನ್ನು ತತ್ತರಿಸುವಂತೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್‍ನಿಂದ ಮಂಗಳವಾರ ಗ್ರಾಮಾಂತರ ಪ್ರದೇಶಗಳಲ್ಲಿರುವ ಪೆಟ್ರೋಲ್ ಬಂಕ್‍ಗಳ ಎದುರು ಪ್ರತಿಭಟನೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15): ಅಗತ್ಯ ವಸ್ತುಗಳ ಬೆಲೆ ಏರಿಸಿ ಕೋಟಿ ಕೋಟಿ ಲೂಟಿ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ಗ್ರಾಮಾಂತರ ಪ್ರದೇಶಗಳಲ್ಲಿರುವ ಪೆಟ್ರೋಲ್ ಬಂಕ್‍ಗಳ ಎದುರು ಪ್ರತಿಭಟನೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಪೆಟ್ರೋಲಿಯಂ ಪ್ರಾಡಕ್ಟ್‌ಗಳನ್ನು ವ್ಯಾಟ್ ಅಡಿಗೆ ತಂದು ಗ್ರಾಹಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವಂತೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ನಗರದ...

error: Content is protected !!