Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದಲಿತರ ಕಡಗಣನೆ ಸಲ್ಲದು : ಚಿತ್ರದುರ್ಗದಲ್ಲಿ ಮಾದಿಗ ಮಹಾಸಭಾ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 22 : ಸವರ್ಣಿಯರಿಂದ ದೌರ್ಜನ್ಯ, ಬಹಿಷ್ಕಾರಕ್ಕೊಳಗಾಗಿರುವ ದಲಿತರಿಗೆ ಇದುವರೆವಿಗೂ ಪರಿಹಾರ ನೀಡದಿರುವುದನ್ನು ವಿರೋಧಿಸಿ ಮಾದಿಗ ಮಹಾಸಭಾದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿರುವವರ ಮೇಲೆ ಧಿಕ್ಕಾರಗಳನ್ನು ಕೂಗಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾದಿಗ ಮಹಾಸಭಾದ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗಾ ಹೊಸದುರ್ಗ ತಾಲ್ಲೂಕಿನ ದೊಡ್ಡಘಟ್ಟ, ಜಂತಿಕೊಳಲು, ಚಳ್ಳಕೆರೆ ತಾಲ್ಲೂಕಿನ ಬೂದಿಹಾಳ್, ದೊಡ್ಡಬೀರನಹಳ್ಳಿ, ಗಿಲಿಕೇನಹಳ್ಳಿ, ಕೋನಿಗರಹಳ್ಳಿ, ಹಿರಿಯೂರು ತಾಲ್ಲೂಕಿನ ಈಶ್ವರಗೆರೆ, ಕಂಬತ್ತಹಳ್ಳಿ, ಗ್ರಾಮಗಳಲ್ಲಿ ಹತ್ತನ್ನೆರಡು ವರ್ಷಗಳ ಹಿಂದೆ ಹಲ್ಲೆ ದೌರ್ಜನ್ಯಕ್ಕೊಳಗಾಗಿರುವ ದಲಿತರಿಗೆ ಪರಿಹಾರ ಸಿಕ್ಕಿಲ್ಲ. ನಿವೇಶನ, ಮನೆ, ಭೂಮಿ, ಸರ್ಕಾರಿ ಉದ್ಯೋಗ, ಕೊಡುವುದಾಗಿ ನಂಬಿಸಿರುವ ಕಾಂಗ್ರೆಸ್ ಬಿಜೆಪಿ. ಸರ್ಕಾರಗಳು ವಂಚಿಸುತ್ತಲೆ ಬರುತ್ತಿವೆ. ಯಾವ ಭರವಸೆಗಳು ಈಡೇರಿಲ್ಲ. ಕೆಲವು ಅಧಿಕಾರಿಗಳು ದಲಿತರನ್ನು ಕಡೆಗಣಿಸುತ್ತಿದ್ದಾರೆ. ಇದೆ ಪರಿಸ್ಥಿತಿ ಮುಂದುವರೆದರೆ ಆಗುವ ಅನಾಹುತಗಳಿಗೆ ಸರ್ಕಾರವೆ ನೇರ ಹೊಣೆಯಾಗಬೇಕಾಗುತ್ತದೆಂದು ಎಚ್ಚರಿಸಿದರು.

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ ಸಣ್ಣ ಸಣ್ಣ ವಿಚಾರಗಳಿಗೆ ಹಲ್ಲೆ, ದೌರ್ಜನ್ಯ, ಬಹಿಷ್ಕಾರಗಳು ನಡೆಯುತ್ತಿದೆ. ಹೊಸದುರ್ಗ ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ 40 ದಲಿತರು ದೌರ್ಜನ್ಯಕ್ಕೊಳಗಾಗಿದ್ದಾರೆ. 244 ಅವಲಂಭಿತ ಕುಟುಂಬಗಳಿವೆ. ಘಟನೆ ನಡೆದು ಹತ್ತು ವರ್ಷಗಳಾಗಿದ್ದರೂ ಅನ್ಯಾಯ ಸರಿಪಡಿಸದಿರುವುದು ದೊಡ್ಡ ದುರಂತ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದರು.

ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡುತ್ತ ದೌರ್ಜನ್ಯ ನಡೆಸಿರುವವರ ಮೇಲೆ ಪೊಲೀಸರು ಇದುವರೆವಿಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂತ್ರಸ್ಥರಿಗೆ ಪರಿಹಾರವೂ ಸಿಕ್ಕಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದರು.
ಶೋಷಿತ ಸಮಾಜದ ಅಧ್ಯಕ್ಷ ರಾಜಪ್ಪ, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಶಂಕರಪ್ಪ ಗಿಲಿಕೇನಹಳ್ಳಿ, ಕುಂಚಿಗನಹಾಳ್ ಮಹಲಿಂಗಪ್ಪ, ಎಸ್.ಮಲ್ಲಿಕಾರ್ಜುನ, ಎನ್.ನಾಗೇಂದ್ರಪ್ಪ, ರಾಮಚಂದ್ರಪ್ಪ, ಸುನಿಲ್‍ಯಾದವ್, ಕೆ.ರಾಜು, ಕೆಂಚಪ್ಪ, ರಂಗಪ್ಪ, ಚಂದ್ರಶೇಖರ ದೊಡ್ಡಘಟ್ಟ, ರಾಮಚಂದ್ರಪ್ಪ, ಸುನಿತ, ಲಕ್ಕಮ್ಮ, ಜಯಮ್ಮ
ಗೌರಮ್ಮ, ಚಂದ್ರಮ್ಮ ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment