Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೊನೆಗೂ ಕೋರ್ಟ್ ನಿಂದ ಸಿಕ್ತು ದರ್ಶನ್ ಗೆ ಗುಡ್ ನ್ಯೂಸ್..!

---Advertisement---

ಬೆಂಗಳೂರು : ನಟ ದರ್ಶನ್, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಇನ್ನು ವಿಚಾರಣೆಯನ್ನು ಎದುರಿಸುತ್ತಲೇ ಇದ್ದಾರೆ. ಇದರ ನಡುವೆ ದರ್ಶನ್ ನಟನೆಯ ಡೆವಿಲ್ ಸಿನಿಮಾ ಶೂಟಿಂಗ್ ಕೂಡ ನಡೆಯುತ್ತಾ ಇದೆ. ಆದರೆ ಈ ಸಿನಿಮಾದ ಶೂಟಿಂಗ್ ವಿದೇಶದಲ್ಲಿದ್ದು, ದರ್ಶನ್ ಅವರಿಗೆ ಹೋಗುವುದಕ್ಕೆ ಅನುಮತಿ ಇರಲಿಲ್ಲ. ಇದೀಗ ಆ ಸಂಬಂಧ ದರ್ಶನ್ ಅವರಿಗೆ ಕೋರ್ಟ್ ಗುಡ್ ನ್ಯೂಸ್ ಕೂಡ ಕೊಟ್ಟಿದೆ.

ಡೆವಿಲ್ ಸಿನಿಮಾದ ಶೂಟಿಂಗ್ ಗಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ. 64ನೇ ಸಿಸಿಹೆಚ್ ನ್ಯಾಯಾಲಯ ಅನುಮತಿ ನೀಡಿ ಆದೇಶಿಸಿದೆ. ವಿಚಾರಣೆ ನಡೆಸಿದ ನ್ಯಾ. ಐ.ಪಿ.ನಾಯ್ಕ್ ಇದ್ದ ಪೀಠವೂ ದರ್ಶನ್ ಅವರಿಗೆ ಶೂಟಿಂಗ್ ಗಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ. ಈ ಮೂಲಕ ದರ್ಶನ್ ವಿದೇಶಕ್ಕೆ ಹೋಗಬಹುದಾಗಿದೆ.

ಡೆವಿಲ್ ಸಿನಿಮಾಗಾಗಿ ಪ್ರೇಕ್ಷಕರು, ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯ್ತಾ ಇದ್ದಾರೆ. ಹೀಗಾಗಿಯೇ ಮಿಲನಾ ಪ್ರಕಾಶ್ ಅವರು ಕೂಡ ಶೂಟಿಂಗ್ ಅನ್ನು ವೇಗವಾಗಿ ಮಾಡ್ತಾ ಇದ್ದಾರೆ. ಡೆವಿಲ್ ಒಂದಷ್ಟು ಭಾಗದ ಶೂಟಿಂಗ್ ಗಾಗಿ ದುಬೈ ಮತ್ತು ಯೂರೋಪ್ ಗೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಕೋರ್ಟ್ ನಿಂದ ಅನುಮತಿ ಪಡೆಯಲು CRPF ಸೆಕ್ಷನ್ 439(1)(B) ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯಲ್ಲಿ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿಯನ್ನು ಕೋರಲಾಗಿದೆ. ಅಂದ್ರೆ ಜೂನ್ 1 ರಿಂದ ಜೂನ್ 25ರ‌ ತನಕ ವಿದೇಶಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೆರಳಲಿದ್ದಾರೆ. ಕೋರ್ಟ್ ಅನುಮತಿ ಮೇರೆಗೆ ಶೂಟಿಂಗ್ ಗೆ ತೆರಳಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment