ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್, ಜಾಮೀನು ಅರ್ಜಿ ನಿರಾಕರಣೆಯಾಗಿದ್ದು, ಹೈಕೋರ್ಟ್ ಮೆಟ್ಟಿಲೇರುವ ನಿರ್ಧಾರ ಮಾಡಿದ್ದಾರೆ. ಇದರ ನಡುವೆ ದರ್ಶನ್ ಅವರಿಗೆ ವಿಪರೀತ ಬೆನ್ನು ನೋವು ಕಾಣಿಸಿಕೊಂಡಿದೆ. ಬಳ್ಳಾರಿ ಜೈಲಿಗೆ ಶಿಫ್ಟ್ ಆದಾಗಿನಿಂದ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಸ್ಕ್ಯಾನಿಂಗ್ ಮಾಡಿಸಿಕೊಳ್ಳಿ ಎಂದರೂ ಮಾಡಿಸಿಕೊಳ್ಳಲು ಒಪ್ಪುತ್ತಿಲ್ಲ. ಅತ್ತ ಜಾಮೀನು ಸಿಗುತ್ತಿಲ್ಲ. ಹೀಗಾಗಿ ಜೈಲಿನಲ್ಲಿ ದರ್ಶನ್ ಗಾಗಿ ಸೌಲಭ್ಯಗಳನ್ನೇ ಹೆಚ್ಚು ಮಾಡಿದ್ದಾರೆ.
ದರ್ಶನ್ ಅವರ ಮೆಡಿಕಲ್ ರಿಪೋರ್ಟ್ ನಲ್ಲಿ ವಿಮ್ಸ್ ನ್ಯೂರೋ ಸರ್ಜನ್ ಡಾ.ವಿಶ್ವನಾಥ್ ಅವರು, ಮೆಡಿಕಲ್ ಬೆಡ್ ಮತ್ತು ದಿಂಬು ನೀಡುವಂತೆ ಸಲಹೆ ನೀಡಿದ್ದರು. ಇದೀಗ ವೈದ್ಯರ ಸಲಹೆಯಂತೆ ಬಳ್ಳಾರಿ ಜೈಲಿಗೆ ಮೆಡಿಕಲ್ ದಿಂಬು ಮತ್ತು ಬೆಡ್ ನೀಡಲಾಗಿದೆ. ಜಿಲ್ಲಾಸ್ಪತ್ರೆಯಿಂದ ತರಿಸಿ ಕೊಡಲಾಗಿದೆ. ಮೇಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ತರಿಸಿ ಕೊಡಲಾಗಿದೆ.
ಇನ್ನು ದರ್ಶನ್ ಗ್ಯಾಂಗ್ ಕಡೆಯಿಂದ ಕೊಲೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಮಗು ಆಗಿದೆ. ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಜಾಮೀನಿಗಾಗಿ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಜಾಮೀನು ನೀಡಲು ನಿರಾಕರಣೆ ಮಾಡಿತ್ತು. ಶಕ್ತಿ ಪೀಠಗಳಿಗೆಲ್ಲ ಹೋಗಿ ಬಂದಿದ್ದ ವಿಜಯಲಕ್ಷ್ಮೀ ಅವರಿಗೂ ಈ ಬಾರಿ ಜಾಮೀನು ಸಿಗಬಹುದು ಎಂಬ ನಿರೀಕ್ಷೆ ಇತ್ತು. ದರ್ಶನ್ ಅವರು ಕೂಡ ಜಾಮೀನು ಸಿಗುವ ಭರವಸೆಯಲ್ಲಿದ್ದರು. ಆದರೆ ಅದೆಲ್ಲವೂ ಹುಸಿಯಾಗಿದೆ. ಜಾಮೀನಿಗಾಗಿ ದರ್ಶನ್ ಹೈಕೋರ್ಟ್ ಮೆಟ್ಡಿಲೇರಲು ನಿರ್ಧಾರ ಮಾಡಿದ್ದಾರೆ.