Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಫೋಟೋ ವೈರಲ್ : ರೇಣುಕಾಸ್ವಾಮಿ ತಂದೆ ಶಿವನಗೌಡ ಹೇಳಿದ್ದೇನು..?

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 25: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜಾಮೀನಿಗೂ ಅರ್ಜಿ ಕೂಡ ಹಾಕಿಲ್ಲ. ಆದರೆ ಇದರ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿದೆ. ಆ ಫೋಟೋದಲ್ಲಿ ದರ್ಶನ್ ಮತ್ತು ಇನ್ನಿಬ್ಬರು ಸ್ನೇಹಿತರು ಕುಳಿತುಕೊಂಡು ಸಿಗರೇಟ್ ಸೇದುತ್ತಿದ್ದಾರೆ. ನಗು ಮುಖದಿಂದ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಇದೀಗ ವೈರಲ್ ಆಗಿದೆ.


ಈ ಫೋಟೋ ಸುದ್ದಿ ಕೇಳುತ್ತಿದ್ದಂತೆ ಮೃತ ರೇಣುಕಾಸ್ವಾಮಿ ತಂದೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರ ಮೇಲೆ  ಮತ್ತು ಸರ್ಕಾರದ ಮೇಲೆ ನಂಬಿಕೆ ಇದೆ. ಇದನ್ನ ನೋಡಿ ನಮಗೆ ಶಾಕ್ ಆಯ್ತು ಎಂದು ಮೃತ ರೇಣುಕಾ ಸ್ವಾಮಿ ತಂದೆ ಶಿವನಗೌಡರ್ ಕಣ್ಣಿಟ್ಟಿದ್ದಾರೆ. ಇದು ಸಮಗ್ರವಾಗಿ ಇದು ಕೂಡಾ ತನಿಖೆ ಆಗಲಿ.ಎಲ್ಲಿ ತಪ್ಪಾಗಿದೆ ಎಂದು ಪರಿಶೀಲನೆ ಮಾಡಲಿ. ಯಾರಾದ್ರೂ ತಪ್ಪು ಮಾಡಿದ್ರೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದರು.

ನಟ ದರ್ಶನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಒಂದೇ ವಿಚಾರಗಳನ್ನು ಬೈಲಿಗೆಳೆಯುತ್ತಿವೆ. ಈ ಮೂಲಕ ಎಲ್ಲರಿಗೂ, ಸರ್ಕಾರಕ್ಕೂ ಎಚ್ಚರಿಕೆ ಕೊಡ್ತದ್ದಿರಾ, ತಮಗೂ ಕೂಡಾ ತುಂಭಾ ಧನ್ಯವಾದ, ಸರ್ಕಾರ ಕೂಡ ಗಮನ ಹರಿಸಬೇಕು ಎಂದರು. ನ್ಯಾಯಾಂಗ ಇದೆ, ಚಾರ್ಜ್ ಶೀಟ್ ಹಾಕಿದ ಬಳಿಕ ಗೊತ್ತಾಗುತ್ತದೆ. ಜಡ್ಜ್ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಪೂರ್ಣ ನಂಬಿಕೆ ಇದೆ ಎಂದು ಶಿವನಗೌಡ ತಿಳಿಸಿದರು.

ಆದರೆ ಈ ಫೋಟೋ ಜೈಲಿನಲ್ಲಿರುವ ಫೋಟೋನಾ ಎಂಬುದು ಇನ್ನು ಕನ್ಫರ್ಮ್ ಆಗಿಲ್ಲ. ಶೂಟಿಂಗ್ ಸಮಯದಲ್ಲಿ ತೆಗೆದ ಫೋಟೋ ಅಂತ ಕೂಡ ಕೆಲವರು ಹೇಳುತ್ತಿದ್ದಾರೆ. ಪೊಲೀಸರೇ ಇದಕ್ಕೆ ಸ್ಪಷ್ಟನೆ ನೀಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment