Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್‌ಗೆ ಆಸ್ಪತ್ರೆ ಚಿಕಿತ್ಸೆ ಭಾಗ್ಯ: ನ್ಯಾಯಾಲಯದಿಂದ ಅನುಮತಿ

---Advertisement---

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ನ್ಯಾಯಾಲಯದಿಂದ ಮಹತ್ವದ ನಿರಾಳತೆ ಸಿಕ್ಕಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನ್ಯಾಯಾಲಯ ಅನುಮತಿ ನೀಡಿದೆ.ಜೈಲಿನಲ್ಲಿ ನಿರೀಕ್ಷಿತ ಮಟ್ಟದ ವೈದ್ಯಕೀಯ ಸೌಲಭ್ಯ ಹಾಗೂ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ದರ್ಶನ್ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಬೆನ್ನುನೋವಿನ ಸಮಸ್ಯೆಗೆ ತಜ್ಞ ವೈದ್ಯರಿಂದ ಫಿಸಿಯೋಥೆರಪಿ ಚಿಕಿತ್ಸೆ ಅಗತ್ಯವಿರುವುದರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.

ದರ್ಶನ್ ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯವಿದೆ ಎಂದು ಕಂಡುಬಂದಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅವಕಾಶ ಕಲ್ಪಿಸಿ ಆದೇಶಿಸಿದೆ.
ನ್ಯಾಯಾಲಯದ ಆದೇಶದ ಬಗ್ಗೆ ತಕ್ಷಣವೇ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ದರ್ಶನ್ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಾಲಯ, ಆದೇಶದ ಪ್ರತಿಯನ್ನು ಇ-ಮೇಲ್ ಮೂಲಕ ಕೂಡಲೇ ಜೈಲು ಅಧಿಕಾರಿಗಳಿಗೆ ರವಾನಿಸುವಂತೆ ನಿರ್ದೇಶನ ನೀಡಿತು.

ಇದೇ ವೇಳೆ, ದರ್ಶನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ತಮ್ಮ ಆಕ್ಷೇಪಣೆಗಳನ್ನು ಸೋಮವಾರದೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ (ಎಸ್‌ಪಿಪಿ) ಸೂಚನೆ ನೀಡಲಾಗಿದೆ.
ದರ್ಶನ್ ಅವರ ಆರೋಗ್ಯ ಸಮಸ್ಯೆ, ಜೈಲಿನಲ್ಲಿನ ವೈದ್ಯಕೀಯ ಸೌಲಭ್ಯ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವಿಚಾರ ಇದೀಗ ಮತ್ತೆ ಚರ್ಚೆಗೆ ಬಂದಿದೆ. ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯದ ಕುರಿತು ವೈದ್ಯಕೀಯ ಅಭಿಪ್ರಾಯದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಸೋಮವಾರ ಎಸ್‌ಪಿಪಿ ಸಲ್ಲಿಸಲಿರುವ ಆಕ್ಷೇಪಣೆಗಳ ಮೇಲೂ ಕುತೂಹಲ ಮೂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now