Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಗನ್ ಲೈಸೆನ್ಸ್‌ ತಾತ್ಕಾಲಿಕವಾಗಿ ಅಮಾನತು ಮಾಡಿದ ಪೊಲೀಸರು..!

---Advertisement---

ನಟ ದರ್ಶನ್ ಅವರಿಗೆ ಇತ್ತೀಚೆಗೆ ಗನ್ ವಿಚಾರವಾಗಿ ಪೊಲೀಸರು ನೋಟೀಸ್ ನೀಡಿದ್ದರು. ಗನ್ ಲೈಸೆನ್ಸ್ ರದ್ದು ಮಾಡಲು ಮುಂದಾಗಿದ್ದರು. ಆದರೆ ಪೊಲೀಸರ ನೋಟೀಸ್ ಗೆ ಉತ್ತರ ನೀಡಿದ್ದ ದರ್ಶನ್ ಅವರು, ಲೈಸೆನ್ಸ್ ರದ್ದು ಮಾಡದಂತೆ ಮನವಿ ಮಾಡಿದ್ದರು. ಅಷ್ಟೇ ಅಲ್ಲ ನನಗೆ ಗನ್ ಬಳಕೆ ಅಗತ್ಯವಿದೆ ಎಂದಿದ್ದರು. ಇದೀಗ ಪೊಲೀಸರು ದರ್ಶನ್ ಉತ್ತರಕ್ಕೆ ಕ್ಯಾರೆ ಎನ್ನದೆ ಲೈಸೆನ್ಸ್ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಿದ್ದಾರೆ.

ಸದ್ಯ ದರ್ಶನ್ ಅವರು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಆರೋಪಿ ಸ್ಥಾನದಲ್ಲಿದ್ದಾರೆ. ಜಾಮೀನಿನ ಮೇಲೆ ಹೊರಗೆ ಬಂದಿದ್ದರು, ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. ಹೀಗಾಗಿ ಕೊಲೆ ಆರೋಪ ಹೊತ್ತಿರುವ ದರ್ಶನ್ ಅವರು ಗನ್ ಇಟ್ಟುಕೊಳ್ಳುವಂತೆ ಇಲ್ಲ. ಕೇಸ್ ಮುಗಿಯುವ ತನಕ ಲೈಸೆನ್ಸ್ ಬಳಸುವಂತೆಯೂ ಇಲ್ಲ ಎಂದು ಪೊಲೀಸರು ಸ್ಟ್ರಿಕ್ಟ್ ಆರ್ಡರ್ ನೀಡಿದ್ದಾರೆ. ಆರೋಪಿ ಸ್ಥಾನದಲ್ಲಿರುವ ದರ್ಶನ್ ಬೆದರಿಕೆಯೊಡ್ಡುವ ಸಾಧ್ಯತೆ ಇದೆ. ಹೀಗಾಗಿ ಗನ್ ಅವರ ಬಳಿ ಇರುವುದು ಬೇಡ ಎಂದು ಪೊಲೀಸರು ನೋಟೀಸ್ ನೀಡಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆದಾಗ ದರ್ಶನ್ ಅವರಿಗೆ ಸಂಬಂಧಿಸಿದ 37 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಈ ಹಣ ಇರಿಸಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದರು. ಈ ಹಣಕ್ಕೆ ಸಂಬಂಧಿಸಿದಂತೆಯೂ ದರ್ಶನ್ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಆ ಹಣ ವ್ಯಕ್ತಿಯೊಬ್ಬರಿಗೆ ಸಾಲವಾಗಿ ನೀಡಿದ್ದೆನು. ಆ ಹಣವನ್ನು ವಾಪಾಸ್ ನೀಡಿದ್ದರು. ಅದನ್ನು ಮನೆಯಲ್ಲಿಯೇ ಇಟ್ಟುಕೊಂಡಿದ್ದರು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...