ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 21 : ನವರಾತ್ರಿ ಪ್ರಯುಕ್ತ ನಗರದ ಕಾಳಿಕಾದೇವಿ ರಸ್ತೆಯಲ್ಲಿರುವ ಶ್ರೀ ಕಾಳಿಕಾ ದೇವಿ ವಿಶ್ವಕರ್ಮ ದೇವಸ್ಥಾನದಲ್ಲಿ ಸೆ. 22ರ ಸೋಮವಾರ ಪ್ರಾತಃಕಾಲ ಗಣಪತಿ ಪೂಜೆ, ಪುಣ್ಯಾಹ ವಾಚನ ಘಟಸ್ಥಾಪನೆ ಮತ್ತು ಧ್ವಜಾರೋಹಣ ನಡೆಯುವುದು.
ಸೆಪ್ಟೆಂಬರ್. 22 ರಿಂದ ಅ. 02ರ ಗುರುವಾರದವರೆಗೆ ಶ್ರೀ ಅಮ್ಮನವರಿಗೆ ವೇದೋಕ್ತ ಪಂಚಾಮೃತಾಭಿಷೇಕ, ದುರ್ಗಾಹೋಮ ಮತ್ತು ಪುಷ್ಪಾಲಂಕಾರ, ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ದಿನಾಂಕ 30ರ ಮಂಗಳವಾರ ದುರ್ಗಾಷ್ಟಮಿ, ಅ. 01ರ ಬುಧವಾರ ಆಯುಧ ಪೂಜೆ, 02ರ ಗುರುವಾರ ವಿಜಯದಶಮಿ ಹಾಗೂ ಸಂಜೆ 6.30ಕ್ಕೆ ಪಾಲಕಿ ಉತ್ಸವದೊಂದಿಗೆ ಬನ್ನಿ ಮುಡಿಯುವುದು ನಂತರ ಪ್ರಸಾದ ವಿನಿಯೋಗವಿರುತ್ತದೆ. ಪ್ರತಿ ದಿನ ಸಂಜೆ 6 ರಿಂದ 7 ರವರೆಗೆ ಶ್ರೀ ಕಾಳಿಕಾದೇವಿ ಮಹಿಳಾ ಭಜನಾ ಮಂಡಳಿಯಿಂದ ಲಲಿತಾ ಸಹಸ್ರನಾಮ ಪಾರಾಯಣ ಮತ್ತು ಸಂಜೆ 7 ರಿಂದ 9 ರವರೆಗೆ ಕೆ.ಹೆಚ್. ಕುಮಾರಾಚಾರ್ ಮತ್ತು ಸಂಗಡಿಗರಿಂದ ಶ್ರೀ ದೇವಿಯ ಪಾರಾಯಣ ನಡೆಯಲಿದೆ.

ಅ.1ರ ಬುಧವಾರ ರಾತ್ರಿ 8ಕ್ಕೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀ ಕಾಳಿಕಾದೇವಿ ವಿಶ್ವಕರ್ಮ ದೇವಸ್ಥಾನ ಆಡಳಿತ ಸಮಿತಿ ಟ್ರಸ್ಟ್ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















