ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ಈ ಬಾರಿಯ ನಾಡಹಬ್ಬ ಮೈಸೂರು ದಸರಾ (Mysuru Dasara) ಸ್ತಬ್ಧಚಿತ್ರ ಪ್ರದರ್ಶನದ ಬೆಂಗಳೂರು ವಿಭಾಗದಲ್ಲಿ ಚಿತ್ರದುರ್ಗ ಜಿಲ್ಲೆಯ ರಾಜ ವೀರ ಮದಕರಿ ನಾಯಕ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.
ಚಿತ್ರದುರ್ಗದ ಐತಿಹಾಸಿಕ ಕಲ್ಲಿನ ಕೋಟೆ, ರಾಜಾ ಮದಕರಿ ನಾಯಕ ಆನೆಯ ಮದವನ್ನು ಅಡಗಿಸುತ್ತಿರುವ ದೃಶ್ಯ,
ಒಂಟಿಕಂಬದ ಬಸವಣ್ಣ, ಕೋಟೆಯನ್ನು ರಕ್ಷಿಸುತ್ತಿರುವ ಸೈನಿಕರು, ಕಹಳೆ ಊದುತ್ತಿರುವ ಸೈನಿಕರು, ಆಡುಮಲ್ಲೇಶ್ವರ ಮೃಗಾಲಯ ಸೇರಿದಂತೆ ವನ್ಯಜೀವಿಗಳು ಇರುವಂತಹ
ಸ್ಥಬ್ದ ಚಿತ್ರ ನೋಡುಗರನ್ನು ಮನಸೂರೆಗೊಳಿಸುತ್ತದೆ. ಹೀಗಾಗಿ ದಸರಾ ಮಹೋತ್ಸವದಲ್ಲಿ ಈ ಸ್ತಬ್ದಚಿತ್ರಕ್ಕೆ ಬೆಂಗಳೂರು ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದೆ.


ಈ ಸ್ತಬ್ಧ ಚಿತ್ರ ಪರಿಕಲ್ಪನೆಗೆ ಮಾರ್ಗದರ್ಶನ ನೀಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಆಕಾಶ್ ಅವರಿಗೂ ತಯಾರಿಕೆ ಹಾಗೂ ಪ್ರದರ್ಶನದಲ್ಲಿ ಶ್ರಮವಹಿಸಿದ ಎಲ್ಲಾ ಕಲಾವಿದರಿಗೂ ಸಹಕರಿಸಿದ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೂ ಹಾಗೂ ನೋಡಲ್ ಅಧಿಕಾರಿಗಳಿಗೂ, ಜಿಲ್ಲಾ ತಂಡಕ್ಕೆಅಭಿನಂದನೆಗಳು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















