ದಾವಣಗೆರೆ (ಫೆ.18) : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಡಿ ಫೆ.19 ರಂದು ಹರಿಹರ ತಾಲ್ಲೂಕು ಕೊಕ್ಕನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಒಳಗೊಂಡಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು ಅಥವಾ ಯೋಜನೆಗಳಾದ ಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ, ಅತಿವೃಷ್ಠಿ ಅಥವಾ ಬರಪರಿಹಾರ, ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ಉಳಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಆಯಾ ತಹಶೀಲ್ದಾರರು ಹಾಗೂ ತಾಲ್ಲೂಕು ಮಟ್ಟದ ಇತರೆ ಅಧಿಕಾರಿಗಳು ಸಹ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು ಒಟ್ಟಾರೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.
ವಿವಿಧೆಡೆ ಗ್ರಾಮ ವಾಸ್ತವ್ಯದ ವಿವರ : ಫೆ.19 ರಂದು ದಾವಣಗೆರೆ ತಾಲ್ಲೂಕಿನ ಆನಗೋಡು ಹೋಬಳಿಯ ಹೆಬ್ಬಾಳು ಗ್ರಾಮ.
ಹೊನ್ನಾಳಿ ತಾಲ್ಲೂಕಿನ ಕಸಬಾ ಹೋಬಳಿಯ ಮಾಸಡಿ.
ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ-2 ಹೋಬಳಿಯ ನಲ್ಕುದುರೆ.
ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿಯ ಚದರಗೊಳ್ಳ.
ನ್ಯಾಮತಿ ತಾಲ್ಲೂಕಿನ ಗೋವಿನಕೋವಿ-1 ಹೋಬಳಿಯ ತಗ್ಲಿಹಳ್ಳಿ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.