Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆ.19ರಂದು ಕೊಕ್ಕನೂರಿನಲ್ಲಿ ಡಿಸಿ ಗ್ರಾಮವಾಸ್ತವ್ಯ : ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ

Facebook
Twitter
Telegram
WhatsApp

ದಾವಣಗೆರೆ (ಫೆ.18) : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಡಿ ಫೆ.19 ರಂದು ಹರಿಹರ ತಾಲ್ಲೂಕು ಕೊಕ್ಕನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಒಳಗೊಂಡಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.  ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು ಅಥವಾ ಯೋಜನೆಗಳಾದ ಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ, ಅತಿವೃಷ್ಠಿ ಅಥವಾ ಬರಪರಿಹಾರ, ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಉಳಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಆಯಾ ತಹಶೀಲ್ದಾರರು ಹಾಗೂ ತಾಲ್ಲೂಕು ಮಟ್ಟದ ಇತರೆ ಅಧಿಕಾರಿಗಳು ಸಹ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು ಒಟ್ಟಾರೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.

ವಿವಿಧೆಡೆ ಗ್ರಾಮ ವಾಸ್ತವ್ಯದ ವಿವರ : ಫೆ.19 ರಂದು ದಾವಣಗೆರೆ ತಾಲ್ಲೂಕಿನ ಆನಗೋಡು ಹೋಬಳಿಯ ಹೆಬ್ಬಾಳು ಗ್ರಾಮ.

ಹೊನ್ನಾಳಿ ತಾಲ್ಲೂಕಿನ ಕಸಬಾ ಹೋಬಳಿಯ ಮಾಸಡಿ.

ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ-2 ಹೋಬಳಿಯ ನಲ್ಕುದುರೆ.

ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿಯ ಚದರಗೊಳ್ಳ.

ನ್ಯಾಮತಿ ತಾಲ್ಲೂಕಿನ ಗೋವಿನಕೋವಿ-1 ಹೋಬಳಿಯ ತಗ್ಲಿಹಳ್ಳಿ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!