ದಾವಣಗೆರೆ : ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ,(ಜ.06): ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿ ನಿಟುವಳ್ಳಿ ಫಿರ್ಕಾ ಗ್ರಾಮ ಸಹಾಯಕರ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ತಹಸಿಲ್ದಾರ್ ಅವರು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿರುತ್ತಾರೆ.

ಅರ್ಜಿದಾರರು ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು, ಕನಿಷ್ಠ 25 ವರ್ಷ ವಯಸ್ಸಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು.

ವಿದ್ಯಾವಂತರಾಗಿರಬೇಕು, ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು.

ಗ್ರಾಮಸಹಾಯಕ, ತಳವಾರರು, ತೋಟಿಗಳು, ನೀರುಗಂಟಿಗಳು, ವಾಲಿಕರ್ಸ್, ಮಹರ್ಸ್, ಬಾರಿಕರ್ಸ್, ನೀರಾಡಿಗಳು, ಬಲೂತಿದಾರ್ಸ್, ತಳಯಾರಿಸ್, ವೆಟಿಸ್, ಕುಲವಡಿಸ್, ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು.  ಭರ್ತಿ ಮಾಡಿದ ಅರ್ಜಿಯೊಂದಿಗೆ ಜನ್ಮ ದಿನಾಂಕ ದೃಢೀಕರಿಸಲು ಶಾಲಾ ವರ್ಗಾವಣೆ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಲಗತ್ತಿಸಬೇಕು. ವಾಸಸ್ಥಳ ದೃಢೀಕರಣ ಪತ್ರ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ವ್ಯಾಸಂಗ ಪೂರೈಸಿದ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 20 ರೂ. ಸ್ಟಾಂಪ್ ಪೇಪರ್ ನಲ್ಲಿ ಸ್ವಯಂ ಘೋಷಣಾ ಪ್ರಮಾಣ ಪತ್ರ, ವಂಶವೃಕ್ಷ, ಒಪ್ಪಿಗೆ ಪ್ರಮಾಣಪತ್ರ (ಒಂದೇ ಕುಟುಂಬದವರಾಗಿದ್ದರೆ), ಚಾರಿತ್ರ್ಯದ ಬಗ್ಗೆ ಪೊಲೀಸ್ ವರದಿ ಸಲ್ಲಿಸಬೇಕು.  ಆಸಕ್ತಿಯುಳ್ಳವರು ಅಗತ್ಯ ದಾಖಲೆಗಳ ವಿವರಗಳನ್ನು ಜ.20 ರ ಸಂಜೆ 5-30 ರೊಳಗೆ ದಾವಣಗೆರೆ ತಾಲ್ಲೂಕು ಕಛೇರಿಗೆ ಅರ್ಜಿ ಸಲ್ಲಿಸಬೇಕು ಎಂದು ದಾವಣಗೆರೆ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

42 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago