Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಅ. 23 ರಂದು ಮತದಾರರಿಗೆ  ವಿಶೇಷ ಸಾಂದರ್ಭಿಕ ರಜೆ

---Advertisement---

ದಾವಣಗೆರೆ : ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾನವು 2026ರ ಅಕ್ಟೋಬರ್ 23 ರ ಶುಕ್ರವಾರ ನಡೆಯಲಿರುವುದರಿಂದ,  ಅರ್ಹಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ  ಶುಕ್ರವಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ

ಮತದಾರರು ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ಪೂರ್ವಾನುಮತಿಯನ್ನು ಪಡೆಯುವ ಷರತ್ತಿಗೊಳಪಟ್ಟು, ರಜೆ ಮಂಜೂರು ಮಾಡಲು ಅಧಿಕಾರವುಳ್ಳ ಪ್ರಾಧಿಕಾರಿಗಳು ಈ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬೇಕೆಂದು ಅದೇಶದಲ್ಲಿ ತಿಳಿಸಲಾಗಿದೆ.

ವಿಧಾನ ಪರಿಷತ್ ಚುನಾವಣೆ: ಮದ್ಯ ಮಾರಾಟ ನಿಷೇಧ ಆದೇಶದಲ್ಲಿ ತಿದ್ದುಪಡಿ – ಜಿಲ್ಲಾಧಿಕಾರಿ ಆದೇಶ

ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2026ರ ಹಿನ್ನೆಲೆಯಲ್ಲಿ ಈ ಹಿಂದೆ ಹೊರಡಿಸಲಾಗಿದ್ದ ಮದ್ಯ ಮಾರಾಟ ನಿಷೇಧ (ಶುಷ್ಕ ದಿನ) ಆದೇಶಕ್ಕೆ ಸಂಬಂಧಿಸಿದಂತೆ ದಾವಣಗೆರೆ ಮಹಾನಗರ ಪಾಲಿಕೆ, ದಾವಣಗೆರೆ ತಾಲ್ಲೂಕು , ಹರಿಹರ ತಾಲ್ಲೂಕು (ಹರಿಹರ ನಗರ ವ್ಯಾಪ್ತಿಯ ಕೆ.ಎಸ್.ಬಿ.ಸಿ.ಎಲ್ ಹೊರತುಪಡಿಸಿ) ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ಟೋಬರ್‌ 21 ರಂದು ಸಂಜೆ 6 ಗಂಟೆಯಿಂದ ಅಕ್ಟೋಬರ್‌ 23 ರ ಸಂಜೆ 7 ಗಂಟೆಯವರಿಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಿದೆ. ದಾವಣಗೆರೆ ನಗರ ವ್ಯಾಪ್ತಿಯ ಕೆ.ಎಸ್.ಬಿ.ಸಿ.ಎಲ್ (KSBCL) ಡಿಪೋ ಹೊರತುಪಡಿಸಿ ಆದೇಶ ಅನ್ವಯವಾಗಲಿದೆ  ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಜಿ.ಎಂ. ಗಂಗಾಧರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.

Join WhatsApp

Join Now

Join Telegram

Join Now