ದಾವಣಗೆರೆ, ಸೆಪ್ಟೆಂಬರ್. 26:: ನಗರ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್18-ದುರ್ಗಾಂಭಿಕ ಫೀಡರ್ ಮಾರ್ಗದಲ್ಲಿ ತುರ್ತು ಜಲಸಿರಿ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಸೆಪ್ಟೆಂಬರ್ 26 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 3:00 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಬಾರ್ ಲೈನ್ ರೋಡ್ , ಕಾಡಪ್ಪ ಕಣ, ಕಾಯಿ ಪೇಟೆ , ಎಂ.ಬಿ. ಕೆರೆ , ಹೊಂಡದ ಸರ್ಕಲ್ , ಚಲುವಾದಿಕೇರಿ , ಜಾಲಿ ನಗರ , ಟೀಚರ್ಸ್ ಕಾಲೋನಿ , ಶಿವಾಜಿ ನಗರ ,ದುರ್ಗಾಂಭಿಕ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ, ಸಂಬಂಧಪಟ್ಟ ಪ್ರದೇಶಗಳ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಈ ಕಾಮಗಾರಿಗೆ ಸಹಕರಿಸಬೇಕಾಗಿ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಬಿದರಕೆರೆ ಮತ್ತು ಜಗಳೂರು ಸುತ್ತಮುತ್ತಲು ವಿದ್ಯುತ್ ವ್ಯತ್ಯಯ
ಚಿತ್ರದುರ್ಗದ 220/66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, 66/11 ಕೆವಿ ಬಿದರಕೆರೆ ಮತ್ತು ಜಗಳೂರು ವಿದ್ಯುತ್ ವಿತರಣಾ ಕೇಂದ್ರಗಳಿಗೆ ಒಳಪಡುವ ಎನ್‌ಜೆವೈ ಮತ್ತು ಐಪಿ ಮಾರ್ಗಗಳ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಸೆಪ್ಟೆಂಬರ್ 26 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ, ಸಾರ್ವಜನಿಕರು ಸಹಕರಿಸಬೇಕಾಗಿ ಬೆಸ್ಕಾಂ ಜಗಳೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ .










