ದಾವಣಗೆರೆ , ಸೆಪ್ಟೆಂಬರ್ 19: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡುವ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕು ಮತ್ತು ಹೋಬಳಿ ಮಟ್ಟಗಳಲ್ಲಿ ಸೆಪ್ಟೆಂಬರ್ 19 ರಂದು ಆಯೋಜಿಸಲಾಗಿದೆ.
ತಾಲ್ಲೂಕು ಮಟ್ಟದ ಕಾರ್ಯಕ್ರಮ: ದಾವಣಗೆರೆ ತಾಲ್ಲೂಕು ಜರೀಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಮರ್ಥ್ ಶಾಮನೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹೋಬಳಿ ಮಟ್ಟದ ಸಭೆಗಳು ವಿವರ: ಹೊನ್ನಾಳಿ ತಾಲ್ಲೂಕು ಸಾಸ್ವೆಹಳ್ಳಿ ಸೌಭಾಗ್ಯ ಕಲ್ಯಾಣ ಮಂಟಪದಲ್ಲಿ ಹಾಗೂ ನ್ಯಾಮತಿಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ, ಚನ್ನಗಿರಿ ಪುರಸಭಾ ಕಚೇರಿ ಒಳಾಂಗಣದಲ್ಲಿ ಹೊನ್ನಾಳಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತು ಹರಿಹರ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.











