Connect with us

Hi, what are you looking for?

ಪ್ರಮುಖ ಸುದ್ದಿ

ಲೋಕಾರ್ಪಣೆಯಾದ ಹೈಟೆಕ್ ಸೌಲಭ್ಯ ಒಳಗೊಂಡ ದಾವಣಗೆರೆ ರೈಲ್ವೇ ನಿಲ್ದಾಣ

ದಾವಣಗೆರೆ: ಅಂದಾಜು 20 ಕೋಟಿ ರೂ., ವೆಚ್ಚದಲ್ಲಿ ನಿರ್ಮಾಣವಾದ ದಾವಣಗೆರೆ ನಗರದ ನವೀಕೃತ ರೈಲ್ವೇ ನಿಲ್ದಾಣವು ಇಂದು ಲೋಕಾರ್ಪಣೆಗೊಂಡಿತು.

ಸಂಸದ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಇತರೆ ಗಣ್ಯರು ನೂತನ ರೈಲ್ವೇ ನಿಲ್ದಾಣದ ಕಾರ್ಯಾರಂಭಕ್ಕೆ ಚಾಲನೆ ನೀಡಿದರು.

ದಾವಣಗೆರೆಯಿಂದ ವಿವಿಧ ಊರುಗಳಿಗೆ ತೆರಳಲು ಪ್ರತಿನಿತ್ಯವೂ ಸುಮಾರು 15 ಸಾವಿರಕ್ಕೂ ಅಧಿಕ ಜನರು ರೈಲು ಸಂಚಾರಕ್ಕೆ ಆತುಕೊಂಡಿದ್ದಾರೆ. 30 ರೈಲುಗಳು ಇಲ್ಲಿ ಸಂಚರಿಸುತ್ತವೆ. ರೈಲ್ವೇ ನಿಲ್ದಾಣದ ಒಳಭಾಗದಲ್ಲಿ ವಿಶ್ರಾಂತಿ ಕೊಠಡಿ, ಕ್ಯಾಂಟೀನ್, ಶೌಚಾಲಯಗಳು ಹೈಟೆಕ್ ಸ್ಪಷ್ಟ ಪಡೆದಿವೆ. ನಿಲ್ದಾಣದ ಹೊರಭಾಗದಲ್ಲಿ ಕಾಂಪೌಂಡ್ ಗೋಡೆ ನಿಲ್ದಾಣದ ಅಂದವನ್ನು ಹೆಚ್ಚಿಸಿದೆ. ರಾತ್ರಿ ವೇಳೆ ಲೈಟಿಂಗ್ ವ್ಯವಸ್ಥೆ ಕಲ್ಪಿಸಿರುವುದು ಆಕರ್ಷಿಸುತ್ತದೆ.

ಹೈಟೆಕ್ ಸೌಲಭ್ಯಗಳು : ನಿಲ್ದಾಣದ ತಳ ಮಹಡಿಯಲ್ಲಿ ಪಾರ್ಸಲ್ ಕಚೇರಿ, ವಿಐಪಿಗಳ ಕೊಠಡಿ, ಸ್ಟೇಷನ್ ಮಾಸ್ಟರ್ ಕಚೇರಿ, ಸೈಟ್ ರಿಫ್ರೆಶ್ಮೆಂಟ್ ರೂಂ, ಚೀಫ್ ಟಿಕೆಟ್ ನಿರೀಕ್ಷಕರ ಕಚೇರಿ, ಬುಕ್ಕಿಂಗ್ ಕಚೇರಿ, ಬುಕ್ ಸ್ಟೋರ್, ಮಹಿಳೆ ಹಾಗೂ ಪುರುಷರ ಪ್ರತ್ಯೇಕ ನಿರೀಕ್ಷಣಾ ಕೊಠಡಿಗಳು, ಪ್ರೀ ರಿಸರ್ವೇಷನ್ ಸೇರಿ 12 ಕೊಠಡಿಗಳಿವೆ.

ಮೊದಲ ಮಹಡಿಯಲ್ಲಿ ಪುರುಷ ಹಾಗೂ ಮಹಿಳೆಯರ ಪ್ರತ್ಯೇಕ ವಸತಿ ನಿಲಯ, ಸಿಬ್ಬಂದಿಗಳ ವಿಶ್ರಾಂತಿ ಕೊಠಡಿ ಹಾಗೂ ವಿವಿಧ ರೀತಿಯ ಕಚೇರಿ ಉಪಯೋಗಕ್ಕೆ 11 ಕೊಠಡಿಗಳನ್ನು ನಿರ್ಮಿಸಲಾಗಿದೆ.
ಒಳಭಾಗದಲ್ಲಿ 3 ರಿಸರ್ವೇಷನ್ ಕೌಂಟರ್ಗಳು ಹಾಗೂ 3 ಜನರಲ್ ಟಿಕೆಟ್ ಕೌಂಟರ್ಗಳಿರಲಿವೆ. ನಿಲ್ದಾಣದ ಹೊರ ಭಾಗದಲ್ಲಿ 85 ದ್ವಿಚಕ್ರ ವಾಹನಗಳು 32 ನಾಲ್ಕು ಚಕ್ರದ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಮುಖ್ಯ ದ್ವಾರ ಹಾಗೂ ಮುಂಭಾಗದ ಪಾರ್ಕಿಂಗ್ ಪ್ರದೇಶದ ಅಭಿವೃದ್ಧಿ ಸೇರಿ 9.50 ಕೋಟಿ ರೂ. ಎರಡನೇ ಪ್ರವೇಶ ದ್ವಾರ, ಕಟ್ಟಡ ಹಾಗೂ ಆ ಭಾಗದ ಆ ಭಾಗದಲ್ಲಿ ಸರ್ಕುಲೇಟಿಂಗ್ ಏರಿಯಾ ಅಭಿವೃದ್ಧಿ, ಪ್ಲಾಟ್ ಫಾರಂ ಹಾಗೂ ಫುಟ್ ಓವರ್ ಬ್ರಿಡ್ಜ್ ಗೆ 4.50 ಕೋಟಿ ರೂ. ಮತ್ತು ಎಸ್ಕಲೇಟರ್ 4.45 ಕೋಟಿ ರೂ. ಸೇರಿ ಒಟ್ಟಾರೆ 18.75 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನವೀಕರಣಗೊಂಡಿದೆ.

ಪಾರ್ಕಿಂಗ್ ಜಾಗ ವಿಸ್ತರಣೆ : ನಿಲ್ದಾಣದ ಮುಂಭಾಗದಲ್ಲಿರುವ ಎಸಿ ಕಚೇರಿ ಬಳಿಯ 1600 ಚದರಡಿ ಜಾಗ ಇಲಾಖೆಗೆ ದೊರೆತಿದ್ದು, ಮುಂದಿನ ಹಂತದಲ್ಲಿ ಈ ಜಾಗವನ್ನು ಪಾರ್ಕಿಂಗ್ ಸ್ಥಳವನ್ನಾಗಿ ವಿಸ್ತರಿಸಲಿದೆ.
ಸಂಸದರ ವಿಶೇಷ ಕಾಳಜಿ: ನಿಲ್ದಾಣದ ನವೀಕರಣ ಕಾಮಗಾರಿ ಆರಂಭದಿಂದ ಇದೀಗ ಲೋಕಾರ್ಪಣೆಗೊಳ್ಳುವ ಹಂತದವರೆಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರ ವಿಶೇಷ ಕಾಳಜಿ ತೋರಿಸುತ್ತಿದ್ದಾರೆ ಎನ್ನಬಹುದು.

ಎಸ್ಕಲೇಟರ್ ಸೌಲಭ್ಯ: 4.45 ಕೋಟಿ ರೂ. ವೆಚ್ಚದಲ್ಲಿ ಎಸ್ಕಲೇಟರ್ ವ್ಯವಸ್ಥೆ ಹೊಂದಿರುವ ರಾಜ್ಯದ 5 ಪ್ರಮುಖ ನಿಲ್ದಾಣಗಳ ಪೈಕಿ ದಾವಣಗೆರೆಯೂ ಒಂದು ಎನ್ನುವುದು ಹೆಮ್ಮೆಯ ವಿಚಾರ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬಳ್ಳಾರಿ ನಿಲ್ದಾಣಗಳಲ್ಲಿ ಮಾತ್ರ ಇಲ್ಲಿಯವರೆಗೆ ಎಸ್ಕಲೇಟರ್ ಸೌಲಭ್ಯ ಇತ್ತು. ಅದೇ ರೀತಿ ಇದೀಗ ದಾವಣಗೆರೆ ನಿಲ್ದಾಣದಲ್ಲೂ ಸಹ 4.45 ಕೋಟಿ ರೂ. ವೆಚ್ಚದಲ್ಲಿ ಎಸ್ಕಲೇಟರ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಇದರಿಂದಾಗಿ ಪ್ರಯಾಣಿಕರು ಒಂದು ಪ್ಲಾಟ್ ಫಾರಂನಿಂದ ಮತ್ತೊಂದು ಪ್ಲಾಟ್ ಫಾರಂಗೆ ಸುಲಭವಾಗಿ ಸಂಚರಿಸಬಹುದಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

error: Content is protected !!