ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ದಾವಣಗೆರೆ, ಮಾರ್ಚ್. 30 : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯ ಘೋಷಿಸಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇದೀಗ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರಿಗೆ ಬೆಂಬಲ ಘೋಷಿಸಿದ್ದಾರೆ.ಆರಂಭದಲ್ಲಿ ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದ ಸಾದಿಕ್ ಪೈಲ್ವಾನ್, ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ತಮ್ಮ ನಿರ್ಧಾರವನ್ನು ಬದಲಿಸಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಶಾಂತಿ ನೆಲೆಸುವ ಉದ್ದೇಶದಿಂದಲೇ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ತಿಳಿಸಿದ್ದಾರೆ.ಬಿಜೆಪಿಯ ವಿರುದ್ಧ ಕಿಡಿಕಾರಿದ ಅವರು, “ಬಿಜೆಪಿಗೆ ಅಧಿಕಾರ ನೀಡಿದರೆ ರಾಜ್ಯದಲ್ಲಿ ಜಾತಿವಾದ ಹೆಚ್ಚಾಗುತ್ತದೆ. ಅದನ್ನು ತಡೆಯಲು ನಾನು ಹಿಂದೆ ಸರಿದಿದ್ದೇನೆ” ಎಂದು ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪರವಾಗಿ ಬಹಿರಂಗವಾಗಿ ಕೆಲಸ ಮಾಡುವುದಾಗಿ ಘೋಷಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಶಾಂತಿ ಮತ್ತು ಸಾಮರಸ್ಯ ಕಾಪಾಡಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಾದಿಕ್ ಪೈಲ್ವಾನ್, ಸಮಾಜದ ಒಳಿತಿಗಾಗಿ ಹಾಗೂ ಧರ್ಮಗಳ ನಡುವೆ ಶಾಂತಿ ಕಾಪಾಡಲು ಈ ನಿರ್ಧಾರ ಕೈಗೊಂಡಿದ್ದೇನೆ ಎಂದರು.
ಪಕ್ಷ ಸೇರ್ಪಡೆ ವೇಳೆ ಯಾವುದೇ ಹುದ್ದೆ ಅಥವಾ ಜವಾಬ್ದಾರಿ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ನಾನು ಮತ್ತೆ ಕಾಂಗ್ರೆಸ್ ಕುಟುಂಬಕ್ಕೆ ಮರಳಿದ್ದೇನೆ. ಪಕ್ಷದ ಗೆಲುವಿಗಾಗಿ ಸಂಪೂರ್ಣವಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದರು.ತಾನು ಚುನಾವಣಾ ಕಣದಲ್ಲೇ ಮುಂದುವರಿದಿದ್ದರೆ ವಿರೋಧ ಪಕ್ಷಕ್ಕೆ ಲಾಭವಾಗಬಹುದಿತ್ತು ಎಂದು ಅಭಿಪ್ರಾಯಪಟ್ಟ ಅವರು, ಇತರ ಅಭ್ಯರ್ಥಿಗಳನ್ನೂ ಮನವೊಲಿಸಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡುವಂತೆ ಪ್ರೇರೇಪಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್