ದಾವಣಗೆರೆ : ದಾವಣಗೆರೆ ಜಿಲ್ಲಾದ್ಯಂತ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಾರ್ವಜನಿಕ ಆಚರಣೆಯಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21(1)ರಂತೆ ದಾವಣಗೆರೆ ಜಿಲ್ಲಾದ್ಯಂತ (ಹರಿಹರ ನಗರ ವ್ಯಾಪ್ತಿಯ ಕೆ.ಎಸ್.ಬಿ.ಸಿ.ಎಲ್ ಡಿಪೋ ಹೊರತುಪಡಿಸಿ) ಬೆಳಿಗ್ಗೆ 6.00 ಗಂಟೆಯಿಂದ ರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಆದೇಶಿಸಿದ್ದಾರೆ
ಈ ಆದೇಶವನ್ನು ಸಂಬಂಧಪಟ್ಟ ಅಬಕಾರಿ, ಅಬಕಾರಿ ಜಾರಿದಳ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದ್ದಾರೆ.
ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅಕ್ಟೋಬರ್ 21 ರಿಂದ 23 ರವರೆಗೆ ಮದ್ಯ ಮಾರಾಟ, ಸಾಗಾಣಿಕೆ ನಿಷೇಧಿಸಿ ಆದೇಶ
ಕರ್ನಾಟಕ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ, ದಾವಣಗೆರೆ ಮಹಾನಗರ ಪಾಲಿಕೆ, ದಾವಣಗೆರೆ ತಾಲೂಕು, ಹರಿಹರ ತಾಲೂಕು (ನಗರ ವ್ಯಾಪ್ತಿಯ ಕೆ.ಎಸ್.ಆರ್.ಪಿ.ಎಲ್ ಪ್ರದೇಶ ಹೊರತುಪಡಿಸಿ) ಮತ್ತು ಜಗಳೂರು ತಾಲೂಕು ವ್ಯಾಪ್ತಿಯಲ್ಲಿ ಅಕ್ಟೋಬರ್ 21 ರಂದು ಸಂಜೆ 06.00 ಗಂಟೆಯಿಂದ ಅಕ್ಟೋಬರ್ 23 ರ ಸಂಜೆ 07.00 ಗಂಟೆಯವರೆಗೆ ಮದ್ಯ ಮಾರಾಟ, ಸಾಗಾಣಿಕೆ ಹಾಗೂ ಸರಬರಾಜನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ನಗರ ವ್ಯಾಪ್ತಿಯ ಕೆ.ಎಸ್.ಆರ್.ಪಿ.ಎಲ್ ಪ್ರದೇಶವನ್ನು ಮಾತ್ರ ಇದರಿಂದ ಹೊರತುಪಡಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದ್ದು, ಉಳಿದಂತೆ ಸದರಿ ಆದೇಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಅವರು ತಿಳಿಸಿದ್ದಾರೆ.











