Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ಗಾಂಧಿ ಜಯಂತಿ ಪ್ರಯುಕ್ತ ನಾಳೆ ಜಿಲ್ಲೆ ಯಲ್ಲಿ ಮಾಂಸ ಮಾರಾಟ ನಿಷೇಧ

---Advertisement---

ದಾವಣಗೆರೆ  : ಮಹಾತ್ಮ ಗಾಂಧಿ ಜಯಂತಿಯ ಪ್ರಯುಕ್ತ  ಅಕ್ಟೋಬರ್ 02,  ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಪ್ರಾಣಿ ಮಾಂಸಹಾಗೂ ಮೀನಿನ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು. ನಿಯಮ ಮೀರಿ ಮಾಂಸ ಮಾರಾಟ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಮಹಾನಗರ ಪಾಲಿಕೆಯ ಕಾಯ್ದೆಯನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ .

ಅಕ್ಟೋಬರ್‌ 2 : ಮಹಾತ್ಮ ಗಾಂಧಿ ಹಾಗೂ ಲಾಲ್‌ ಬಹುದ್ದೂರ್‌ ಶಾಸ್ತ್ರಿ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಅಕ್ಟೋಬರ್‌ 02 ರಂದು ಮಹಾತ್ಮ ಗಾಂಧಿ ಹಾಗೂ ಲಾಲ್‌ ಬಹುದ್ದೂರ್‌ ಶಾಸ್ತ್ರಿ ಜಯಂತಿಯನ್ನು ರಾಮನಗರದಲ್ಲಿರುವ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದೆ. ಅಂದು ಮಹಾತ್ಮ ಗಾಂಧೀಜಿ ಪ್ರಿಯವಾದ ಗೀತೆಗಳನ್ನು ಪ್ರಸ್ತುತಪಡಿಸಲಾಗುವುದು, ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಸದರಿ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ  ಸಾರ್ವಜನಿಕರು ಭಾಗವಹಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಧನಂಜಯ ತಿಳಿಸಿದ್ದಾರೆ.

Join WhatsApp

Join Now

Join Telegram

Join Now