Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ಗೆ ಬೆಂಬಲ ಕೋರಿದ ಎಸ್.ಎಚ್. ಸೈಯದ್

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್-9 ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‍ರನ್ನು ಬಹುಮತಗಳಿಂದ ಗೆಲ್ಲಿಸುವಂತೆ ಭಾರತೀಯ ರಾಷ್ಟ್ರೀಯ ಅಲ್ಪಸಂಖ್ಯಾತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಸ್.ಎಚ್.ಸೈಯದ್ ಮನವಿ ಮಾಡಿದರು.

 

ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಪಕ್ಷದ ನಾಯಕರು ಸಮರ್ಥ್‍ಗೆ ಟಿಕೆಟ್ ನೀಡಿರುವುದು ಸೂಕ್ತವಾಗಿದೆ. ಈಗಾಗಲೆ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ಆರಂಭಗೊಂಡಿದೆ. ಸದ್ಯದಲ್ಲಿಯೇ ಚಳ್ಳಕೆರೆಯಿಂದ ತಂಡ ದಾವಣಗೆರೆಗೆ ಹೋಗಿ ಅಭ್ಯರ್ಥಿ ಪರ ಮತಯಾಚಿಸಲಿದ್ದೇವೆಂದು ತಿಳಿಸಿದರು.

 

ಹಿಂದಿನಿಂದಲೂ ಡಾ.ಶಾಮನೂರು ಶಿವಶಂಕರಪ್ಪನವರ ಕುಟುಂಬ ಕಾಂಗ್ರೆಸ್‍ಗೆ ಮೀಸಲಾಗಿದೆ. ಬಿಜೆಪಿ.ಯ ಯಾವ ಆಸೆ ಆಮಿಷಗಳಿಗೂ ಬಲಿಯಾಗದೆ ಪಕ್ಷಕ್ಕೆ ನಿಷ್ಟರಾಗಿದ್ದಾರೆ. ಕೋಮು ಸೌಹಾರ್ಧತೆಗೆ ಮೊದಲಿನಿಂದಲೂ ಒತ್ತು ನೀಡುತ್ತ ಬರುತ್ತಿರುವ ಶಾಮನೂರು ಶಿವಶಂಕರಪ್ಪನವರ ಕುಟುಂಬದ ಕುಡಿ ಸಮರ್ಥ್‍ಗೆ ಮತ ನೀಡಿ ಗೆಲ್ಲಿಸಿ. ವಿರೋಧಿಗಳ ಭಾವುಕ ಮಾತುಗಳಿಗೆ ಮರುಳಾಗಬೇಡಿ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರಲ್ಲಿ ವಿನಂತಿಸಿದರು.
ಎಲ್.ಐ.ಸಿ.ಬಶೀರ್‍ಹಯಾತ್, ಎಂ.ದಾದಾಪೀರ್, ಮಹಮದ್ ಇಸ್ಮಾಯಿಲ್ ಪಾಷ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...