ದಾವಣಗೆರೆ : ಹರಿಹರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ 3 ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿಯನ್ನು ರದ್ದುಪಡಿಸಲು ಸಹಕಾರ ಸಂಘಗಳ ಉಪ ನಿಬಂಧಕರು ಆದೇಶ ಹೊರಡಿಸಿದೆ.
ಸಹಕಾರ ಸಂಘಗಳ ಕಾಯ್ದೆ ಹಾಗೂ ಬೈಲಾ ರೀತ್ಯಾ ಹಾಗೂ ಸ್ಥಾಪನೆ ಉದ್ದೇಶಗಳ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸದೇ ಸ್ಥಗಿತಗೊಂಡಿದ್ದ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಗ್ರಾಮದ ಶ್ರೀ ಕರಿಬಸವೇಶ್ವರ ಪತ್ತಿನ ಸಹಕಾರ ಸಂಘ ನಿಯಮಿತ, ಹಲಸಬಾಳು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ, ಮಹಜೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಮೂರು ಸಂಘಗಳ ಆಡಳಿತ ಮಂಡಳಿಯು ಸಂಘಗಳನ್ನು ಮುನ್ನಡೆಸಲು ನಿರಾಸಕ್ತಿ ತೋರಿರುವುದರಿಂದ ಇವುಗಳ ನೋಂದಣಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಸದರಿ ಸಂಘಗಳ ನೋಂದಣಿ ರದ್ದುಪಡಿಸುವ ಕುರಿತು ಯಾರಿಗಾದರೂ ಆಕ್ಷೇಪಣೆಗಳಿದ್ದರೆ, 15 ದಿನಗಳ ಒಳಗಾಗಿ ದಾವಣಗೆರೆ ‘ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ’ಗೆ ಸೂಕ್ತ ಲಿಖಿತ ದಾಖಲೆಗಳೊಂದಿಗೆ ಸಲ್ಲಿಸಬಹುದು. ನಿಯಮಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಬಾರದಿದ್ದಲ್ಲಿ, ಸಂಘಗಳ ನೋಂದಣಿಯನ್ನು ರದ್ದುಪಡಿಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.











