ಚಿತ್ರದುರ್ಗ,(ಡಿಸೆಂಬರ್.23) : ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿದ್ಯಾನಿಲಯ, ದಾವಣಗೆರೆ ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಾಪಕರ ಸಂಘ, ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಪುರುಷರ ಮತ್ತು ಮಹಿಳೆಯರ 11ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ಹಾಗೂ ತಂಡದ ಆಯ್ಕೆಯನ್ನು ಡಿಸೆಂಬರ್ 25 ರಿಂದ 27ರವರೆಗೆ ಚಿತ್ರದುರ್ಗದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಡಿ.25ರಂದು ಬೆಳಿಗ್ಗೆ 11ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಉದ್ಘಾಟನೆ ನೆರವೇರಿಸುವರು. ಹಿರಿಯೂರು ಶಾಸಕರಾದ ಪೂರ್ಣಿಮ ಕೆ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಸ್.ವಿ.ಹಲಸೆ ಧ್ವಜಾರೋಹಣ ನೆರವೇರಿಸುವರು. ದಾವಣಗೆರೆ ವಿಶ್ವವಿದ್ಯಾನಿಲಯ ಕುಲಸಚಿವೆ ಪ್ರೊ.ಗಾಯತ್ರಿ ದೇವರಾಜ್ ಕ್ರೀಡಾ ಜ್ಯೋತಿ ಸ್ವೀಕಾರ ಮಾಡುವರು. ದಾವಣಗೆರೆ ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯರಾದ ಜಿ.ಗೀತಾ ಪ್ರತಿಜ್ಞಾವಿಧಿ ಬೋಧಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯೂರು ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಧರಣೇಂದ್ರಯ್ಯ, ದಾವಣಗೆರೆ ವಿಶ್ವವಿದ್ಯಾನಿಲಯ ಡೀನ್ ಹಗೂ ನಿರ್ದೇಶಕ ಡಾ.ಕೆ.ವೆಂಕಟೇಶ್ ಭಾಗವಹಿಸುವರು.
ಡಿ.27ರಂದು ಮುಕ್ತಾಯ ಸಮಾರಂಭ: ಕ್ರೀಡಾಕೂಟದ ಮುಕ್ತಾಯ ಸಮಾರಂಭವು ಡಿ.27ರಂದು ಮಧ್ಯಾಹ್ನ 3ಕ್ಕೆ ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಯಲಿದೆ.
ಹಿರಿಯೂರು ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಡಿ.ಧರಣೇಂದ್ರಯ್ಯ ಅಧ್ಯಕ್ಷತೆ ವಹಿಸುವರು. ಪೊಲೀಸ್ ಅಧೀಕ್ಷಕರಾದ ಜಿ.ರಾಧಿಕಾ ಬಹುಮಾನ ವಿತರಣೆ ಮಾಡುವರು. ದಾವಣಗೆರೆ ವಿಶ್ವವಿದ್ಯಾನಿಲಯ ಕುಲಸಚಿವೆ ಪ್ರೊ.ಗಾಯತ್ರಿ ದೇವರಾಜ್ ಸಮಾರೋಪದ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ಹಣಕಾಸು ಅಧಿಕಾರಿ ಪ್ರೊ.ಪ್ರಿಯಾಂಕ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ದಾವಣಗೆರೆ ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯೆ ವಿಜಯಲಕ್ಷ್ಮಿ ಹಿರೇಮಠ್, ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ, ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗೋಪಾಲಪ್ಪ, ದಾವಣಗೆರೆ ವಿಶ್ವವಿದ್ಯಾನಿಲಯ ಡೀನ್ ಡಾ.ಕೆ.ವೆಂಕಟೇಶ್, ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಮಕ್ಸುದ್ ಅಹಮದ್, ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಕ್ರೀಡಾಕೂಟದ ಕಾರ್ಯದರ್ಶಿ ಹೆಚ್.ತಿಪ್ಪೇಸ್ವಾಮಿ ಅಭಿನಂದನಾ ನುಡಿಗಳನ್ನಾಡುವರು.
ಕ್ರೀಡಾಕೂಟದಲ್ಲಿ ಸುಮಾರು 500 ಪುರುಷ ಹಾಗೂ 300 ಮಹಿಳಾ ಕ್ರೀಡಾಕೂಟಗಳು ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ 50 ಕಾಲೇಜುಗಳಿಂದ ಭಾವಹಿಸುವರು. ಕ್ರೀಡಾಕೂಟದಲ್ಲಿ ಭಾಗವಹಿಸುವ ಮಹಿಳಾ ಕ್ರೀಡಾಪಟುಗಳಿಗೆ ಸರ್ಕಾರಿ ವಿಜ್ಞಾನ ಕಾಲೇಜು ಹಾಗೂ ಸ್ಟೇಡಿಯಂನಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಪುರುಷ ಕ್ರೀಡಾಪಟುಗಳಿಗೆ ಸರ್ಕಾರಿ ಕಲಾ ಕಾಲೇಜು ಚಿತ್ರದುರ್ಗದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ.
ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉಚಿತವಾಗಿ ಮಧ್ಯಾಹ್ನದ ಲಘು ಉಪಹಾರವನ್ನು ನೀಡಲಾಗುವುದು. ಕುಡಿಯುವ ನೀರಿನ ಸೌಲಭ್ಯ, ಪ್ರಥಮ ಚಿಕಿತ್ಸೆ ಹಾಗೂ ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಮುಖ್ಯ ತೀರ್ಪುಗಾರರಾದ ಆರಣ್ ಶಿವಮೊಗ್ಗ, ಸಹಾಯಕ ತೀರ್ಪುಗಾರರಾಗಿ ಬೋರಣ್ಣ ಹಾಗೂ ನುರಿತ ತೀರ್ಪುಗಾರರನ್ನು ಸಹ ನಿಯೋಜನೆ ಮಾಡಿಕೊಳ್ಳಲಾಗಿದೆ. ಕ್ರೀಡಾಕೂಟ ಆಯೋಜನೆಗೆ ಎಲ್ಲ ರೀತಿಯ ಸಕಲ ಸಿದ್ಧತೆಗಳೊಂದಿಗೆ ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದರ ಮೂಲಕ ಕ್ರೀಡಾಕೂಟ ನಡೆಸಲಾಗುತ್ತದೆ ಎಂದು ಕ್ರೀಡಾಕೂಟದ ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಹೆಚ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.