ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ಬಾಪೂಜಿ ವಿದ್ಯಾಸಂಸ್ಥೆ ದಾವಣಗೆರೆ, ಬಿಇಎ.ಶಿಕ್ಷಣ ಮಹಾವಿದ್ಯಾಲಯ, ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಅ.6 ಮತ್ತು 7 ರಂದು ನಡೆದ 2025-26 ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯದ ಬಿಇಡಿ. ಶಿಕ್ಷಣ ಮಹಾವಿದ್ಯಾಲಯಗಳ ಕ್ರೀಡಾ ಮತ್ತು ಸಾಂಸ್ಕøತಿಕ ಕೂಟದಲ್ಲಿ ಚಿತ್ರದುರ್ಗದ ಪಿ.ವಿ.ಎಸ್. ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಬಿಇಡಿ. ಪ್ರಶಿಕ್ಷಣಾರ್ಥಿಗಳು ಭಾಗವಹಿಸಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಪಿ.ವಿ.ಎಸ್. ಶಿಕ್ಷಣ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುವ ಬಿಇಡಿ. ಪ್ರಶಿಕ್ಷಣಾರ್ಥಿಗಳನ್ನು ಪಿ.ವಿ.ಎಸ್.ಆಸ್ಪತ್ರೆಯ ಡಾ.ಪಿ.ವಿ.ಶ್ರೀಧರಮೂರ್ತಿರವರು ಗುರುವಾರ ಅಭಿನಂದಿಸಿದರು. ಪಿ.ವಿ.ಎಸ್.ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಉಷ ಆರ್. ಮತ್ತು ಸಿಬ್ಬಂದಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.









