ದಾವಣಗೆರೆ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು.!

1 Min Read

ಶಾಲಾ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಬಲಿಯಾಗಿರುವ ಅತ್ಯಂತ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ಇಲ್ಲಿನ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಪೋಷಕರು ಮತ್ತು ಶಾಲಾ ಸಿಬ್ಬಂದಿ ಕಂಗಾಲಾಗಿದ್ದಾರೆ.

ದಾವಣಗೆರೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಹೋಗಿದ್ದ ಎನ್ನಲಾಗಿದೆ. ಆದರೆ, ಹಠಾತ್ತನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನ ಮಕ್ಕಳಲ್ಲಿಯೂ ಹೃದಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು ಪೋಷಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.ಕುಟುಂಬದಲ್ಲಿ ಯಾರಿಗಾದರೂ ಚಿಕ್ಕ ವಯಸ್ಸಿನಲ್ಲಿ ಹೃದಯ ಸಂಬಂಧಿ ಸಮಸ್ಯೆಗಳಿದ್ದರೆ, ಮಕ್ಕಳಿಗೂ ಒಮ್ಮೆ ಇಸಿಜಿ (ECG) ಅಥವಾ ಮೂಲಭೂತ ಹೃದಯ ತಪಾಸಣೆ ಮಾಡಿಸುವುದು ಉತ್ತಮ.

Share This Article
Enable Notifications OK No thanks