ದಾವಣಗೆರೆ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಇತ್ತಿಚೆಗೆ ಕಾಂಗ್ರೆಸ್ ನಾಯಕರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಇದೀಗ ಆ ಹೇಳಿಕೆಗೆ ಸಂಬಂಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಿಂದ ನೋಟೀಸ್ ಜಾರಿಯಾಗಿದೆ.
ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅಂತವರನ್ನು ಗುಂಡಿಟ್ಟು ಕೊಲ್ಲಬೇಕೆಂಬ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರಂ ನಗರದಲ್ಲಿರುವ ಕೆ ಎಸ್ ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಪೊಲೀಸರು, ನೋಟೀಸ್ ಜಾರಿ ಮಾಡಿದ್ದಾರೆ. ಕೆ ಎಸ್ ಈಶ್ವರಪ್ಪ ಅವರು ಕೂಡ ನೋಟೀಸ್ ತೆಗೆದುಕೊಂಡಿದ್ದಾರೆ.
19/2024 ಅಪರಾಧ ಸಂಖ್ಯೆಗೆ ಸಂಬಂಧಿಸಿದಂತೆ ನೋಟೀಸ್ ಜಾರಿಯಾಗಿದೆ. ಈ ನೋಟೀಸ್ ನಲ್ಲಿ ಫೆಬ್ರವರಿ 15ರಂದು ಬೆಳಗ್ಗೆ 10.30ಕ್ಕೆ ಠಾಣೆಗೆ ಹಾಜರಾಗಬೇಕೆಂದು ಸೂಚನೆ ನೀಡಿದ್ದಾರೆ. ಪ್ರಕರಣದ ಕೆಲಸವು ಸತ್ಯಾಂಶ ಹಾಗೂ ಸನ್ನಿವೇಶಗಳನ್ನು ಖಚಿತಪಡಿಸಬೇಕಿದೆ. ಪ್ರಕರಣದಲ್ಲಿ ವಿಚಾರಣೆ ಮಾಡಲು ಸಾಕಷ್ಟು ಪೂರಕ ಕಾರಣಗಳು ಕಂಡು ಬಂದಿದೆ ಎಂದು ನೋಟೀಸ್ ಜಾರಿಮಾಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











