Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ಬಸ್ ಆ್ಯಕ್ಸಲ್ ಕಟ್ ಆಗಿ ಭೀಕರ ಅಪಘಾತ; ಕಾಲೇಜು ವಿದ್ಯಾರ್ಥಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

---Advertisement---

ಸುದ್ದಿ ಒನ್,ದಾವಣಗೆರೆ ಮೇ.08 : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದ ಬಳಿ ಖಾಸಗಿ ಬಸ್ವೊಂದರ ಆ್ಯಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ, ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಬಸ್ನ ಆ್ಯಕ್ಸಲ್ ಏಕಾಏಕಿ ಕಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ದರ್ಶನ್ (21) ಎಂಬ ವಿದ್ಯಾರ್ಥಿ ದುರ್ಮರಣಕ್ಕೀಡಾಗಿದ್ದಾನೆ.

ಅಪಘಾತದ ತೀವ್ರತೆಗೆ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಬಸವಾಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now