Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಉಪಚುನಾವಣೆ ಟಿಕೆಟ್ ವಿವಾದ: 2028ರಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ – ಜಮೀರ್ ಅಹ್ಮದ್

---Advertisement---

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಹಿನ್ನೆಲೆ ಮುಸ್ಲಿಂ ಸಮುದಾಯದ ಅಸಮಾಧಾನ ತೀವ್ರಗೊಂಡಿದ್ದು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್, 2028ರ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲು ಹೈಕಮಾಂಡ್ ಒಪ್ಪಿದೆ ಎಂದು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಮುಂದೆ ಮನವಿ ಮಾಡಲಾಗಿದೆ. ಈ ಬೇಡಿಕೆಗೆ ಸ್ಪಂದಿಸಿದ ಹೈಕಮಾಂಡ್, ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತರನ್ನು ಪರಿಗಣಿಸುವುದಾಗಿ ಭರವಸೆ ನೀಡಿದೆ ಎಂದರು. ಈ ವಿಚಾರದಲ್ಲಿ ಎಸ್.ಎಸ್. ಮಲ್ಲಿಕಾರ್ಜುನ ಅವರ ಸಮ್ಮುಖದಲ್ಲಿಯೇ ಚರ್ಚೆ ನಡೆದಿದ್ದು, ಪಕ್ಷದ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಹೇಳಿದರು.

ಪಕ್ಷದಲ್ಲಿ ಲಕ್ಷಾಂತರ ಕಾರ್ಯಕರ್ತರು ಇದ್ದು, ಕೆಲವರು ಭಾವನಾತ್ಮಕವಾಗಿ ಘೋಷಣೆ ಕೂಗುವುದು ಸಹಜ ಎಂದು ತಿಳಿಸಿದ ಅವರು, ಕಾಂಗ್ರೆಸ್ ಯಾವುದೇ ಒಬ್ಬ ವ್ಯಕ್ತಿಯ ಮೇಲೆ ಅವಲಂಬಿತವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಎಸ್.ಎಸ್. ಮಲ್ಲಿಕಾರ್ಜುನ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಅವರು ತಮ್ಮ ಆತ್ಮೀಯ ಸ್ನೇಹಿತರಾಗಿದ್ದಾರೆ ಎಂದು ಹೇಳಿದರು.

ಚುನಾವಣಾ ಪ್ರಚಾರಕ್ಕೆ ಬರಲು ಮಲ್ಲಿಕಾರ್ಜುನ ಅವರು ಕರೆ ಮಾಡಿದ್ದು, ತಾವು ಸಹ ಭಾಗವಹಿಸುವುದಾಗಿ ಜಮೀರ್ ತಿಳಿಸಿದ್ದಾರೆ. ಜೊತೆಗೆ, ಪಕ್ಷದ ನೀತಿಯ ಪ್ರಕಾರ ಶಾಸಕರ ಕುಟುಂಬಗಳಿಗೆ ಟಿಕೆಟ್ ನೀಡುವ ಪರಿಪಾಠವಿದ್ದು, ಅದೇ ಆಧಾರದ ಮೇಲೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ ಎಂದು ವಿವರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...