Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಉಪಚುನಾವಣೆ : ಬಿಜೆಪಿಯಲ್ಲಿ ಮೂರನೆಯವರಿಗೆ ಆಗುತ್ತಾ ಲಾಭ..?

---Advertisement---

ದಾವಣಗೆರೆ: ಉಪಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಆಂಜನೇಯನ ಬಾಲ ಬೆಳೆದಂತೆ ಬೆಳೆಯುತ್ತಾ ಹೋಗ್ತಿದೆ. ಅತ್ತ ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರು ಕೂಡ ನಮಗೆ ಈ ಬಾರಿಯ ಟಿಕೆಟ್ ಕೊಡಿ ಎಂಬ ಹಠ ಮಾಡಿದ್ದಾರೆ. ಇತ್ತ ಬಿಜೆಪಿಯಲ್ಲಿ ದಶಕಗಳಿಂದ ಇರುವ ಗಲಾಟೆಯಿಂದ ಮೂರನೇಯವರಿಗೆ ಲಾಭವಾಗುವ ಎಲ್ಲಾ ಸಾಧ್ಯತೆಗಳು ಕೂಡ ಎದ್ದು ಕಾಣುತ್ತಿದೆ.

ಈಗಾಗಲೇ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದ್ದು, ಬಿ.ಜಿ. ಅಜಯ್ ಕುಮಾರ್, ಯಶವಂತ್ ರಾವ್ ಜಾಧವ್, ದೇವರಮನೆ ಶಿವಕುಮಾರ್, ಶ್ರೀನಿವಾಸ್ ದಾಸ್ ಕರಿಯಪ್ಪ, ರಾಜನಹಳ್ಳಿ ಶಿವಕುಮಾರ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಆಕಾಂಕ್ಷಿಗಳಾಗಿದ್ದಾರೆ. 2023ರ ಪರಾರ್ಜಿತ ಅಭ್ಯರ್ಥಿ ಬಿ.ಜಿ.ಅಜಯ್ ಕುಮಾರ್ ಪರ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಟೀಂ ಬೆಂಬಲ ನೀಡಿದ್ದರೆ, ಯಶವಂತರಾವ್ ಜಾಧವ್ ಪರ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಟೀಂ ಬೆಂಬಲ ಸೂಚಿಸಿದೆ. ಹೀಗಾಗಿ ಎರಡೂ ಬಣಗಳ ಕುಸ್ತಿಗೆ ಬ್ರೇಕ್ ಹಾಕಲು ಪ್ರಯತ್ನ ಪಟ್ಟು ಸುಸ್ತಾಗಿರುವ ಬಿಜೆಪಿ ನಾಯಕತ್ವ ಈಗ 2024ರ ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಬಗ್ಗೆಯೂ ಚಿಂತನೆ ನಡೆಸಿದೆ.

ಎರಡೂ ಬಣಗಳ ಕಿತ್ತಾಟಕ್ಕೆ ಬ್ರೇಕ್ ಹಾಕಲು ವಿನಯ್ ಕುಮಾರ್ ಗೆ ಟಿಕೆಟ್ ನೀಡುವ ಬಗ್ಗೆಯೂ ಗಂಭೀರ ಚಿಂತನೆಯಲ್ಲಿದ್ದು, ಈಗಾಗಲೇ ವಿನಯಕುಮಾರ್ ಜೊತೆ ಒಂದು ಸುತ್ತಿನ ಮಾತುಕತೆಯನ್ನೂ ದೆಹಲಿ ಮಟ್ಟದ ನಾಯಕರು ಮುಗಿಸಿದ್ದಾರೆ. ಇದರ ಬೆನ್ನಲ್ಲೇ ರೇಣುಕಾಚಾರ್ಯ ಟೀಂ ಅಲರ್ಟ್ ಆಗಿದ್ದು, ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ಮೂಲಕ ಟಿಕೆಟ್ ಗಾಗಿ ಲಾಭಿ ಮಾಡುವ ಎಲ್ಲಾ ಸಾಧ್ಯತೆಗಳು ಇದಾವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now