ದಾವಣಗೆರೆ | ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್ ಸೇರಿದಂತೆ ಐವರಿಗೆ ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿ

suddionenews
1 Min Read

 

ದಾವಣಗೆರೆ, ಫೆ. 02  : ಪತ್ರಿಕೋದ್ಯಮದಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆಗೆ ರಾಜ್ಯದ ಪ್ರತಿಷ್ಠಿತ ಪತ್ರಕರ್ತರ ಬೃಹತ್ ಸಂಘಟನೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆಯ 5 ಜನರು ಭಾಜನರಾಗಿದ್ದಾರೆ.

ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ಜನತಾವಾಣಿ ಸುದ್ದಿ ಸಂಪಾದಕ ಎಂ.ಎಸ್. ಶಿವಶರಣಪ್ಪ, ಹಿರಿಯ ವ್ಯಂಗ್ಯಚಿತ್ರಕಾರ ಹೆಚ್.ಬಿ. ಮಂಜುನಾಥ್,
ಮಲ್ನಾಡವಾಣಿ ಸಂಪಾದಕರಾದ ಕೆ. ಏಕಾಂತಪ್ಪ,
ಮತ್ತು ಚಂದನ ಟಿವಿ ಹಿರಿಯ ವರದಿಗಾರ ಎ.ಎಲ್. ತಾರಾನಾಥ್ ಅವರುಗಳು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿ ವರ್ಷವೂ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಸಂದರ್ಭದಲ್ಲಿ ಕೆಯುಡಬ್ಲ್ಯುಜೆ ಈ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯರು ಮತ್ತು ಪ್ರತಿಭಾನ್ವಿತರನ್ನು ಗುರುತಿಸಿ ನೀಡುತ್ತಿರುವ ಈ ಪ್ರಶಸ್ತಿಗೆ ಈ ಬಾರಿ 40ಕ್ಕೂ ಹೆಚ್ಚು ಪತ್ರಕರ್ತರನ್ನು  ಆಯ್ಕೆ ಮಾಡಲಾಗಿದ್ದು, ನಾಳೆ ದಿನಾಂಕ 3 ಮತ್ತು 4ರಂದು ದಾವಣಗೆರೆಯಲ್ಲಿ ಏರ್ಪಾಡಾಗಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ.

ಅಭಿನಂದನೆ : ಪತ್ರಿಕೋದ್ಯಮದಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆಗೆ ರಾಜ್ಯದ ಪ್ರತಿಷ್ಠಿತ ಪತ್ರಕರ್ತರ ಬೃಹತ್ ಸಂಘಟನೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಮಲ್ನಾಡವಾಣಿ ಸಂಪಾದಕರಾದ ಕೆ. ಏಕಾಂತಪ್ಪ, ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ಜನತಾವಾಣಿ ಸುದ್ದಿ ಸಂಪಾದಕ ಎಂ.ಎಸ್. ಶಿವಶರಣಪ್ಪ, ಹಿರಿಯ ವ್ಯಂಗ್ಯಚಿತ್ರಕಾರ ಹೆಚ್.ಬಿ. ಮಂಜುನಾಥ್ ಮತ್ತು ಚಂದನ ಟಿವಿ ಹಿರಿಯ ವರದಿಗಾರ ಎ.ಎಲ್. ತಾರಾನಾಥ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲಾಧ್ಯಕ್ಷ ಇ.ಎಂ. ಮಂಜುನಾಥ, ಪ್ರಧಾನ ಕಾರ್ಯದರ್ಶಿ ಎ. ಫಕೃದ್ಧೀನ್, ಖಜಾಂಚಿ ಎನ್.ವಿ. ಬದರಿನಾಥ್, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ಡಾ. ಸಿ.ವರದರಾಜ್, ಖಜಾಂಚಿ ಮಧು ನಾಗರಾಜ್ ಕುಂದುವಾಡ ಅಭಿನಂದನೆ ಸಲ್ಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *