Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ: ಅಡಿಕೆ ತೋಟದ ತಂತಿಬೇಲಿಗೆ ಸಿಲುಕಿ ಚಿರತೆ ಸಾವು

---Advertisement---

ದಾವಣಗೆರೆ ಸಮೀಪದ ನಿಲೋಗಲ್‌ ಗ್ರಾಮದ ಬಳಿ ಅಡಿಕೆ ತೋಟದ ತಂತಿಬೇಲಿಗೆ ಅಳವಡಿಸಿದ್ದ ಉರುಳಿಗೆ ಸಿಲುಕಿ 1 ವರ್ಷದ ಹೆಣ್ಣು ಚಿರತೆ ಮೃತಪಟ್ಟಿದೆ.ರೈತ ಜಿ. ರಂಗನಗೌಡ ಅವರ ತೋಟದಲ್ಲಿ ಅವಘಡ ನಡೆದಿದೆ. ಶನಿವಾರ ಬೆಳಿಗ್ಗೆ ರೈತರು ತೋಟಕ್ಕೆ ತೆರಳಿದಾಗ ಚಿರತೆ ಸಿಲುಕಿದ್ದು ಗೊತ್ತಾಗಿದೆ.

ಚಿರತೆ ರಕ್ಷಿಸುವ ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ಫಲಕಾರಿಯಾಗಲಿಲ್ಲ.ಚಿರತೆ ಶುಕ್ರವಾರವೇ ಸಿಲುಕಿರಬಹುದು. ಉರುಳಿಗೆ ಮೂರು ಕಾಲು ಸಿಲುಕಿ ತೀವ್ರವಾಗಿ ಗಾಯಗೊಂಡಿತ್ತು ಎಂದು ಭದ್ರಾವತಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ರವೀಂದ್ರಕುಮಾರ್‌ ತಿಳಿಸಿದ್ದಾರೆ.ಚಿರತೆ ಸಾವಿನ ಕುರಿತು ತನಿಖೆ ನಡೆದಿದೆ.  ತಂತಿಬೇಲಿಗೆ ಉರುಳು ಅಳವಡಿಸಿ ಕಾಡುಹಂದಿ ಮತ್ತಿತರ ಪ್ರಾಣಿ ಬೇಟೆಯಾಡುತ್ತಾರೆ. ಅಂತದೇ ಉರುಳಿಗೆ ಚಿರತೆ ಸಿಲುಕಿದೆ ಎಂದು ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)