ದಾವಣಗೆರೆ: ದಾವಣಗೆರೆ ತಾಲೂಕಿನ 66/11 ಕೆ.ವಿ. ಆನಗೋಡು ಹಾಗೂ 66/11 ಕೆ.ವಿ. ಅತ್ತೀಗೆರೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ನವೆಂಬರ್ 27 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಹನುಮನಹಳ್ಳಿ, ಕೊಗ್ಗೆನೂರು, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ. ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬರು, ಹೀರೆತೊಗಲೇರಿ, ಗೊಪಾನಾಳು, ಕಂದಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ (ಬೆಸ್ಕಾಂ) ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
ನ. 29 ರಂದು ಬಿಳಿಚೋಡು, ಪಲ್ಲಾಗಟ್ಟೆ ಹಾಗೂ ಸೊಕ್ಕೆ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

66/11 ಕೆ.ವಿ. ಬಿಳಿಚೋಡು, ಪಲ್ಲಾಗಟ್ಟೆ ಮತ್ತು ಸೊಕ್ಕೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನವೆಂಬರ್ 29 ರ ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎನ್.ಜೆ.ವೈ (NJY) ಮತ್ತು ಐ.ಪಿ (IP) ಮಾರ್ಗಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಜಗಳೂರು ಬೆಸ್ಕಾಂ (ವಾ.ಕಾ ಮತ್ತು ಪಾ ಉಪವಿಭಾಗ) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.








