ದಾವಣಗೆರೆ | ನಾಳೆ ವಿದ್ಯುತ್ ವ್ಯತ್ಯಯ

1 Min Read

ದಾವಣಗೆರೆ ಅ.24 : ದಾವಣಗೆರೆ ಕಾರ್ಯಾಚರಣೆ ವಿಭಾಗ ವ್ಯಾಪ್ತಿಯಲ್ಲಿನ ಯರಗುಂಟೆ ಆವರಗೆರೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅ.25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲೆಬೇತೂರು ಶಾಖಾ ವ್ಯಾಪ್ತಿ:

ದಾವಣಗೆರೆ 66/11 ಕೆ.ವಿ ಯರಗುಂಟೆ ವಿ.ವಿ ಕೇಂದ್ರ ದಿಂದ ಹೊರಡುವ ಚಿತ್ತಾನಹಳ್ಳಿ, ದೇವರಹಟ್ಟಿ ಅಮೃತನಗರ ಹಾಗೂ ಯರಗುಂಟಾ ಮಾರ್ಗದ ಮಾರ್ಗಮುಕ್ತತೆಯನ್ನು, ಹೆಚ್.ಟಿ ಮಾರ್ಗದ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಅ.25 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ  ಯರಗುಂಟಾ, ಅಶೋಕನಗರ, ಕರೂರು, ದೊಡ್ಡಬೂದಿಹಾಳು, ಚಿಕ್ಕಬೂದಿಹಾಳು, ದೇವರಹಟ್ಟಿ, ಬಿ ಕಲ್ಪನಹಳ್ಳಿ, ಚಿತ್ತಾನಹಳ್ಳಿ, ಅಮೃತನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article