Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದಾವಣಗೆರೆಯ ಪಿಎಸ್ಐ ತುಮಕೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

---Advertisement---

ತುಮಕೂರು: ದಾವಣಗೆರೆಯ ಪಿಎಸ್ಐ ನಾಗರಾಜಪ್ಪ ತುಮಕೂರಿನಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದ್ವಾರಕ ಹೊಟೇಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಾಗರಾಜಪ್ಪ ದೇಹ ಪತ್ತೆಯಾಗಿದೆ. 45 ವರ್ಷದ ಪಿಎಸ್ಐ ನಾಗರಾಜಪ್ಪ ಅನುಮಾನಾಸ್ಪದವಾಗಿ ಪ್ರಾಣ ಬಿಟ್ಟಿದ್ದಾರೆ. ದ್ವಾರಕ ಹೊಟೇಲ್ ಗೆ ಬಂದು ಆತ್ಮಹತ್ಯೆ ಮಾಡಿಕೊಂಡರಾ..? ಆತ್ಮಹತ್ಯೆಗೆ ಕಾರಣವಾದರೂ ಏನು ಎಂಬೆಲ್ಲಾ ಬಗ್ಗೆ ಹಲವು ಅನುಮಾನಗಳು ಸೃಷ್ಟಿಯಾಗಿವೆ.

ಹೊಟೇಲ್ ನ 4ನೇ ಮಹಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿದೆ. ಜುಲೈ 1ರಂದು ನಾಗರಾಜಪ್ಪ ಅವರು ತುಮಕೂರಿಗೆ ಬಂದಿದ್ದರು. ದ್ವಾರಕ ಹೊಟೇಲ್ ನಲ್ಲಿ ರೂಮೊಂದನ್ನ ಬಾಡಿಗೆ ಪಡೆದು ವಾಸಿಸುತ್ತಿದ್ದರು. ನಾಲ್ಕನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದರು. ಇದೀಗ ಅದೇ ರೂಮಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜೊತೆಗೆ ಅವರ ರೂಮಿನಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನನ್ನ ಈ ನಿರ್ಧಾರಕ್ಕೆ ನಾನೇ ಕಾರಣ ಎಂದು ಬರೆದುಕೊಂಡಿರುವುದು ಗೊತ್ತಾಗಿದೆ. ಅವರೇ ಈ ಡೆತ್ ನೋಟ್ ಬರೆದಿಟ್ಟಿದ್ದಾರಾ ಎಂಬೆಲ್ಲಾ ವಿಚಾರಗಳು ತನಿಖೆಯ ವೇಳೆ ಬಯಲಿಗೆ ಬರಬೇಕಿದೆ. ಹಾಗೇ ಅವರು ಆತ್ಮಹತ್ಯೆಗೆ ಶರಣಾಗಿ ಎಷ್ಟು ದಿನ ಆಗಿದೆ ಎಂಬುದು ಪೋಸ್ಟ್ ಮಾರ್ಟಮ್ ಬಳಿಕವಷ್ಟೇ ತಿಳಿಯಲಿದೆ. ಯಾಕಂದ್ರೆ ನಾಗರಾಜಪ್ಪ ಅವರು ವಾಸವಿದ್ದ ರೂಮಿನಿಂದ ದುರ್ವಾಸನೆ ಹೊರ ಬಂದಾಗಷ್ಟೇ ಈ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ತುಮಕೂರು ನಗರ ಪೊಲೀಸರು ಸ್ಥಳಕ್ಕೆ ಬಂದು, ಪರಿಶೀಲನೆ ಮಾಡಿದ್ದಾರೆ. ಪಿಎಸ್ಐ ನಾಗರಾಜಪ್ಪ ದಾವಣಗೆರೆಯಿಂದ ತುಮಕೂರಿಗೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವಂತದ್ದು ಏನಿತ್ತು ಎಂಬುದು ತನಿಖೆಯ ನಂತರ ಬಯಲಾಗಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...