ದಾವಣಗೆರೆ ಏ.07 : ಮತದಾನ ನಡೆಯಲಿರುವ ಕ್ಷೇತ್ರಗಳ(ಕೇರಳ, ತಮಿಳನಾಡು, ಪಶ್ಚಿಮ ಬಂಗಾಳ, ಆಸ್ಸಾಂ, ಪುದುಚರಿ, ಬಾಗಲಕೋಟೆ ದಾವಣಗೆರೆ ) ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬAಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ.
ಆದ್ದರಿಂದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ಎಪ್ರಿಲ್ 9 ಗುರುವಾರ ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಕಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡುವಂತೆ ಜಿಲ್ಲಾ ಕಾರ್ಮಿಕಾಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











