Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ದಕ್ಷಿಣ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ಎಷ್ಟು ಕೋಟಿ ಆಸ್ತಿ ಹೊಂದಿದ್ದಾರೆ ?

---Advertisement---

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಟಿ. ಶ್ರೀನಿವಾಸ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರದೊಂದಿಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಅಫಿಡವಿಟ್ ಪ್ರಕಾರ, ಶ್ರೀನಿವಾಸ ಅವರ ಒಟ್ಟು ಆಸ್ತಿ ಮೌಲ್ಯ ₹5.76 ಕೋಟಿಯಾಗಿದೆ. ಇದರಲ್ಲಿ ₹34.79 ಲಕ್ಷ ಮೌಲ್ಯದ ಚರಾಸ್ತಿ ಹಾಗೂ ₹5.41 ಕೋಟಿ ಮೌಲ್ಯದ ಸ್ಥಿರಾಸ್ತಿ ಸೇರಿದೆ. ಸ್ಥಿರಾಸ್ತಿಯಲ್ಲಿ ₹1.13 ಕೋಟಿ ಮೌಲ್ಯದ ಪಿತ್ರಾರ್ಜಿತ ಕೃಷಿ ಭೂಮಿ ಮತ್ತು ₹4.27 ಕೋಟಿ ಮೌಲ್ಯದ ಸ್ವಯಾರ್ಜಿತ ಆಸ್ತಿಗಳು ಒಳಗೊಂಡಿವೆ. ಜೊತೆಗೆ, ಅವರ ಬಳಿ ₹3.60 ಲಕ್ಷ ನಗದು ಇರುವುದಾಗಿ ಉಲ್ಲೇಖಿಸಲಾಗಿದೆ.
45 ವರ್ಷದ ಶ್ರೀನಿವಾಸ ಅವರು ಕೃಷಿ ಮತ್ತು ವ್ಯವಹಾರವನ್ನು ವೃತ್ತಿಯಾಗಿಸಿಕೊಂಡಿದ್ದಾರೆ. 1999-2000ನೇ ಸಾಲಿನಲ್ಲಿ ನಗರದ ಎ.ಆರ್.ಎಂ. ಸೈನ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ) ಪೂರ್ಣಗೊಳಿಸಿದ್ದಾರೆ.

ಇನ್ನೊಂದೆಡೆ, ತುಂಬಿಗೆರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹2.96 ಲಕ್ಷ ಸಾಲ ಬಾಕಿ ಇರುವುದಾಗಿ ತಿಳಿಸಿದ್ದಾರೆ. ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಹಾಗೂ ಯಾವುದೇ ಶಿಕ್ಷೆ ಆಗಿಲ್ಲ ಎಂದು ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)