Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದಾವಣಗೆರೆ | ಮಾರ್ಚ್ 14 ರಂದು ವರ್ಷದ ಪ್ರಥಮ ‘ರಾಷ್ಟ್ರೀಯ ಲೋಕ ಅದಾಲತ್

---Advertisement---

 

ದಾವಣಗೆರೆ, ಫೆಬ್ರವರಿ, 07 : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, 2026 ರ ಮಾರ್ಚ್ 14 ರಂದು ದೇಶಾದ್ಯಂತ ಏಕಕಾಲದಲ್ಲಿ ವರ್ಷದ ಪ್ರಥಮ ‘ರಾಷ್ಟ್ರೀಯ ಲೋಕ ಅದಾಲತ್’ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ತಿಳಿಸಿದ್ದಾರೆ.

 

ರಾಷ್ಟ್ರೀಯ ಲೋಕ್ ಅದಾಲತ್ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸುವರ್ಣಾವಕಾಶ ಕಲ್ಪಿಸಲಾಗಿದೆ. ಇದು ಶುಲ್ಕ ರಹಿತ ಸೇವೆಯಾಗಿದ್ದು ಲೋಕ ಅದಾಲತ್‍ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಯಾವುದೇ ನ್ಯಾಯಾಲಯದ ಶುಲ್ಕ ಇರುವುದಿಲ್ಲ. ಈಗಾಗಲೇ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪ್ರಕರಣ ಇತ್ಯರ್ಥವಾದ ನಂತರ ಪೂರ್ಣವಾಗಿ ಮರುಪಾವತಿಸಲಾಗುವುದು.
ತ್ವರಿತ ಮತ್ತು ಅಂತಿಮ ನ್ಯಾಯ: ಇಲ್ಲಿ ನೀಡಲಾಗುವ ತೀರ್ಪು ಸಿವಿಲ್ ನ್ಯಾಯಾಲಯದ ಡಿಕ್ರಿಗೆ ಸಮನಾಗಿದ್ದು, ಇದರ ವಿರುದ್ಧ ಮೇಲ್ಮನವಿಗೆ ಅವಕಾಶವಿರುವುದಿಲ್ಲ. ಇದರಿಂದ ಸಮಯ ಮತ್ತು ಹಣ ಉಳಿತಾಯವಾಗಲಿದೆ. ಯಾರು ಗೆದ್ದವರಲ್ಲ, ಯಾರು ಸೋತವರಲ್ಲ: ಉಭಯ ಕಡೆಯವರು ಸೌಹಾರ್ದಯುತವಾಗಿ ರಾಜಿ ಮಾಡಿಕೊಳ್ಳುವುದರಿಂದ ವೈರತ್ವ ಕೊನೆಗೊಂಡು ಸಂಬಂಧಗಳು ಸುಧಾರಿಸುತ್ತವೆ.

 

ಸಿವಿಲ್ ಪ್ರಕರಣಗಳು: ಆಸ್ತಿ ವಿಭಾಗದ ದಾವೆಗಳು, ಗಡಿ ಸಮಸ್ಯೆ, ಬಾಡಿಗೆ ವಿವಾದ, ಚೆಕ್ ಬೌನ್ಸ್ ಪ್ರಕರಣಗಳು ಮತ್ತು ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು.
ಅಪರಾಧಿಕ ಪ್ರಕರಣಗಳು: ಕಾನೂನಿನಡಿ ರಾಜಿ ಮಾಡಿಕೊಳ್ಳಬಹುದಾದ ಸಣ್ಣಪುಟ್ಟ ಹೊಡೆದಾಟ, ವಿದ್ಯುತ್ ಕಳ್ಳತನ, ಅಬಕಾರಿ ಮತ್ತು ಅಕ್ರಮ ಮರಳು ಗಣಿಗಾರಿಕೆಯ ಕೆಲವು ಪ್ರಕರಣಗಳು.

 

ಕೌಟುಂಬಿಕ ವಿವಾದಗಳು: ವಿಚ್ಛೇದನ ಹೊರತುಪಡಿಸಿ ಉಳಿದ ವೈವಾಹಿಕ ಸಮಸ್ಯೆಗಳು ಹಾಗೂ ಜೀವನಾಂಶದ ಪ್ರಕರಣಗಳು. ಮೋಟಾರು ವಾಹನ ಅಪಘಾತ ಪರಿಹಾರ, ಕಾರ್ಮಿಕ ವಿವಾದಗಳು, ನೀರಿನ ಮತ್ತು ವಿದ್ಯುತ್ ಬಿಲ್ ಬಾಕಿ ಪ್ರಕರಣಗಳು.

ನ್ಯಾಯಾಲಯದಲ್ಲಿ ಈಗಾಗಲೇ ಪ್ರಕರಣ ಬಾಕಿ ಇದ್ದರೆ ಕಕ್ಷಿದಾರರು ತಮ್ಮ ವಕೀಲರ ಮೂಲಕ ಅಥವಾ ನೇರವಾಗಿ ನ್ಯಾಯಾಲಯಕ್ಕೆ ಮೌಖಿಕವಾಗಿ ವಿನಂತಿಸಿ ಪ್ರಕರಣವನ್ನು ಲೋಕ ಅದಾಲತ್‍ಗೆ ವರ್ಗಾಯಿಸಿಕೊಳ್ಳಬಹುದು. ವ್ಯಾಜ್ಯ ಪೂರ್ವ ಪ್ರಕರಣಗಳಿದ್ದರೆ ಜಿಲ್ಲಾ ಅಥವಾ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

 

“ನ್ಯಾಯಾಲಯಗಳ ಅಲೆದಾಟ ತಪ್ಪಿಸಿ, ನೆಮ್ಮದಿಯ ಜೀವನ ನಡೆಸಲು ಲೋಕ ಅದಾಲತ್ ಅತ್ಯುತ್ತಮ ವೇದಿಕೆಯಾಗಿದೆ. ಸಾರ್ವಜನಿಕರು, ವಕೀಲರು, ವಿವಿಧ ಇಲಾಖೆಗಳು ಹಾಗೂ ವಿಮಾ ಕಂಪನಿಗಳು ಈ ಜನತಾ ನ್ಯಾಯಾಲಯಕ್ಕೆ ಪೂರ್ಣ ಬೆಂಬಲ ನೀಡಿ ಇದರ ಸದುಪಯೋಗ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತಾಲ್ಲೂಕು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಅಥವಾ ಉಚಿತ ಸಹಾಯವಾಣಿ ಸಂಖ್ಯೆ 15100 ಕ್ಕೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...