Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

2027ರೊಳಗೆ ದಾವಣಗೆರೆ – ತುಮಕೂರು ನೇರ ರೈಲ್ವೆ ಮಾರ್ಗ ಪೂರ್ಣಗೊಳಿಸಲಾಗುವುದು : ಕೇಂದ್ರ ಸಚಿವ ವಿ.ಸೋಮಣ್ಣ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 20 :  2027ರ  ಡಿಸೆಂಬರ್ ಒಳಗಡೆ ದಾವಣಗೆರೆಯಿಂದ ತುಮಕೂರು ನೇರ ರೈಲ್ವೆ ಮಾರ್ಗವನ್ನು ಪೂರ್ಣಗೊಳಿಸ ಲಾಗುವುದೆಂದು ರೈಲ್ವೆ ಮತ್ತು ಜಲಶಕ್ತಿ ಕೇಂದ್ರ ರಾಜ್ಯ ಸಚಿವರಾದ ವಿ.ಸೋಮಣ್ಣ ಭರವಸೆಯನ್ನು ನೀಡಿದ್ದಾರೆ.

ನಗರಕ್ಕೆ ಭೇಟಿ ನೀಡಿದ್ದ ಅವರು ವೀರಶೈವ ಸಮಾಜದ ಶ್ರೀ ನೀಲಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ನೀಲಕಂಠೇಶ್ವರ ಸ್ವಾಮಿಗೆ ಪೂಜೆಯನ್ನು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ-ತುಮಕೂರು ನೇರ ರೈಲ್ವೆ ಮಾರ್ಗಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಈಗಾಗಲೇ ರೈಲ್ವೆ ಯೋಜನೆಯನ್ನು ಒಂದು ಹಂತಕ್ಕೆ ತರಲಾಗಿದೆ. ಈಗಾಗಲೇ ದಾವಣಗೆರೆಯಲ್ಲಿ ರೈಲ್ವೆ ಮಾರ್ಗಕ್ಕೆ ಅಗತ್ಯವಾಗಿ ಬೇಕಾದ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ತುಮಕೂರಿನಿಂದ ಚಿತ್ರದುರ್ಗದವರೆಗೂ ಮಾಡಿದ್ದೇವೆ. ಶಿರಾದಿಂದ ಸ್ವಲ್ಪ ಭಾಗ ಭೂಮಿಯನ್ನು ವಶಪಡಿಸಿಕೊಳ್ಳಬೇಕಿದೆ ಇದರ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಡಿವಿಜನಲ್ ಕಮಿಷನರ್‌ಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದರು.

ರಾಮದುರ್ಗ ತುಮಕೂರು 290 ಕಿ.ಮೀ. ದಾವಣಗೆರೆಯಿಂದ ತುಮಕೂರು ನೇರ ರೈಲ್ವೆ ಮಾರ್ಗ 175 ಕಿ.ಮೀ. ಇವೆರಡನ್ನು 2026 ಡಿಸೆಂಬರ್ ಒಳಗಾಗಿ ಈ ಎರಡು ರೈಲುಗಳನ್ನು ಪೂರ್ಣ ಮಾಡುವ ಗುರಿ ಇದೆ ಆದರೂ 2027ರವರೆಗೆ ಸಮಯವನ್ನು ಪಡೆದಿದ್ದೇನೆ ಎಂದ ಅವರು, ನನ್ನ ಇಲಾಖೆಗೆ ಸಂಬಂಧಪಟ್ಟಂತೆ ಚಿತ್ರದುರ್ಗದಲ್ಲಿ ಲೆವೆಲ್ ಕ್ರಾಸಿಂಗ್ ಸೇರಿದಂತೆ ಇತರೆ ಇರುವ ಕೆಲಸವನ್ನು ಮಾಡುವಂತೆ ಮನವಿ ಮಾಡಿದ್ದಾರೆ ಅವುಗಳನ್ನು ಸಹಾ ಅತಿ ಶೀಘ್ರವಾಗಿ ಪೂರ್ಣ ಮಾಡಲಾಗುವುದು ಇದರ ಬಗ್ಗೆ ಡಿವಿಜಲ್ ಕಮಿಷನರ್ ಸೇರಿದಂತೆ ಎಲ್ಲಾ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದರು.

ಚಿತ್ರದುರ್ಗ ಜಿಲ್ಲೆ ಐತಿಹಾಸಿಕವಾಗಿ ಮತ್ತು ಧಾರ್ಮಿಕವಾಗಿ ತನ್ನದೇ ಆದ ಮಹತ್ವ ಪಡೆದುಕೊಂಡಿದ್ದು, ಇಲ್ಲಿ ಅನೇಕ ಕಾರ್ಯಯೋಜನೆಗಳು ನೆನೆಗುದಿಗೆ ಬಿದ್ದಿವೆ. ಅದರಲ್ಲೂ ರೈಲ್ವೆ ಇಲಾಖೆಗೆ ಸಂಬಂಧಿಸಿದ ಚಿತ್ರದುರ್ಗ ರೈಲ್ವೆ ನಿಲ್ದಾಣದ ಹತ್ತಿರ ಪಿ-ಬಿ ರಸ್ತೆಯಲ್ಲಿರುವ ರೈಲ್ವೆ ಗೇಟ್‌ಗೆ ಮೇಲುಸೇತುವೆ ನಿರ್ಮಾಣ ಮಾಡಿಕೊಡುವುದರೊಂದಿಗೆ ಅಲ್ಲಿ ಉಂಟಾಗುವ ವಾಹನ ದಟ್ಟಣೆ ಸಮಸ್ಯೆಗೆ ಪರಿಹಾರ .ಶ್ರೀ ಮುರುಘಾಮಠದ ಮುಂಭಾಗದಿಂದ ಶಿವಮೊಗ್ಗಕ್ಕೆ ಹೋಗುವ ರಸ್ತೆಯಲ್ಲಿರುವ (ರಾಷ್ಟ್ರೀಯ ಹೆದ್ದಾರಿ 13) ರೈಲ್ವೆ ಗೇಟಿನ ಬಳಿ ಪದೇ ಪದೇ ವಾಹನ ದಟ್ಟಣೆ ಉಂಟಾಗಿ ಸ್ಥಳಿಯ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ.

ಈ ಸ್ಥಳದಲ್ಲಿಯೂ ಸಹ ರೈಲ್ವೆ ಮೇಲುಸೇತುವೆ ಅಥವಾ ಕೆಳಸೇತುವೆಯನ್ನಾದರೂ ನಿರ್ಮಿಸಿ ಸಂಚಾರಕ್ಕೆ ಉಂಟಾಗುವ ಸಮಸ್ಯೆಯನ್ನು ನಿವಾರಿಸಬೇಕು, ದಾವಣಗೆರೆಗೆಯಿಂದ ಚಿತ್ರದುರ್ಗ ಮಾರ್ಗವಾಗಿ ತುಮಕೂರಿಗೆ ನೇರ ರೈಲು ಮಾರ್ಗದ ಕಾರ್ಯಯೋಜನೆ ಈಗಾಗಲೇ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನೇರ ರೈಲ್ವೆ ಮಾರ್ಗದ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಿ ಬಹು ದಿನಗಳ ಈ ಭಾಗದ ಜನರ ಬೇಡಿಕೆಯನ್ನು ಈಡೇರಿಸಬೇಕು ಹಾಗೂ ತುರುವನೂರು ರಸ್ತೆಯಲ್ಲಿರುವ ಅವೈಜ್ಞಾನಿಕದಿಂದ ಕೂಡಿರುವ ರೈಲ್ವೆ ಕೆಳಸೇತುವೆಯಲ್ಲಿ ಅದರಲ್ಲೂ ವಿಶೇಷವಾಗಿ ಮಳೆಗಾಲದಲ್ಲಿ ನೀರು ನಿಂತು ಪಾದಾಚಾರಿಗಳಿಗೆ ಮತ್ತು ವಾಹನಗಳಿಗೆ ಓಡಾಡಲು ತೊಂದರೆಯಾಗುತ್ತಿದ್ದು,ಈಸಮಸ್ಯೆಯನ್ನುನಿವಾರಿಸಿಕೊಡಲುವೀರಶೈವಸಮಾಜದವತಿಯಿಂದಮನವಿಮಾಡಲಾಯಿತು.

ಈ ಸಂದರ್ಭದಲ್ಲಿ ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ಎನ್.ತಿಪ್ಪೇಸ್ವಾಮಿ, ಕಾರ್ಯದರ್ಶಿ ಪಿ.ವಿರೇಂದ್ರಕುಮಾರ್, ಖಂಜಾಚಿ ಕೆ.ಎಂ.ತಿಪ್ಪೇಸ್ವಾಮಿ, ನಿರ್ದೇಶಕರುಗಳಾದ ಕೆ.ಎನ್.ವಿಶ್ವನಾಥಯ್ಯ, ಜಿ.ಎಂ.ಪ್ರಕಾಶ್, ಎಸ್.ವಿ.ಸಿದ್ದೇಶ್, ಶ್ರೀಮತಿ ಲತಾ ಉಮೇಶ್, ನಿರಂಜನ ದೇವರಮನೆ, ಎಸ್.ವಿ.ಕೋಟ್ರೇಶ್, ಸಿದ್ದಪ್ಪ ಪಿ.ಎಂ.ಪಿಳ್ಳೇಕೇರನಹಳ್ಳಿ, ಗಾಣಿಗ ಸಮಾಜದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ವಿರೂಪಾಕ್ಷಪ್ಪ, ಅಕ್ಕಮಹಾದೇವಿ ಮಹಿಳಾ ಸಮಾಜದ ಉಪಾಧ್ಯಕ್ಷರಾದ ಶ್ರೀಮತಿ ಮೋಕ್ಷಾ ರುದ್ರಸ್ವಾಮಿ, ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ವಿಜಯಕುಮಾರ್, ನಿರ್ದೆಶಕರಾದ ಪೃಥ್ವೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಕ್ತದಾನ ಮಾಡುವ ಗುಣ ಬೆಳೆಸಿಕೊಳ್ಳಿ : ಶಿವಲಿಂಗಾನಂದ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ನ. 23 : ರಕ್ತವನ್ನು ಕೃತಕವಾಗಿ ತಯಾರು ಮಾಡಲು ಬರುವುದಿಲ್ಲ, ಅಲ್ಲದೆ ಯಾವ ಪ್ರಾಣಿಗಳ ರಕ್ತವನ್ನು

ಸೆಡೆಗಳು ಎಂದಿದ್ದ ರಜತ್ ಗೆ ಬೆವರಿಳಿಸಿದ ಬಾದ್ ಶಾ..!

ಬಿಗ್ ಬಾಸ್ ಕನ್ನಡ ಸೀಸನ್ 11ಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ರಜತ್ ಹಾಗೂ ಶೋಭಾ ಶೆಟ್ಟಿ ಬಂದಿದ್ದಾರೆ. ರಜತ್ ಆರಂಭದಿಂದಾನು ಒಳ್ಳೆ ರೌಡಿಸಂ ತೋರಿಸುವ ರೀತಿಯೇ ಆಟವಾಡುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇರಬೇಕು

ನಿತ್ಯ ವಿದ್ಯಾರ್ಥಿಯಾಗಿರುವವನೆ ಅತ್ಯುತ್ತಮ ಶಿಕ್ಷಕ : ಪ್ರೊ.ಹೆಚ್.ಎ.ಭಿಕ್ಷಾವರ್ತಿಮಠ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ನಿತ್ಯ ವಿದ್ಯಾರ್ಥಿಯಾಗಿರುವವನೆ ಅತ್ಯುತ್ತಮ ಶಿಕ್ಷಕ. ಕೇವಲ ಪದವಿ ಪಡೆದರೆ ಸಾಲದು. ಶಿಕ್ಷಣದ

error: Content is protected !!