Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : 5000 ರೂ.ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೆ ಇಲಾಖೆಯ ಇಬ್ಬರು ಸಿಬ್ಬಂದಿಗಳು

---Advertisement---

ದಾವಣಗೆರೆ.ಜುಲೈ.04: ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಭೂಮಿ ಅಳತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಸರ್ವೆ ಇಲಾಖೆಯ ಇಬ್ಬರು ನೌಕರರನ್ನು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ.

ಸರ್ವೆ ಸೂಪರ್ ವೈಸರ್ ರಾಮಪ್ಪ ಅಡಿವೆಪ್ಪ ದಾಸರ್ ಹಾಗೂ ಸರ್ಕಾರಿ ಪರವಾನಗಿ ಭೂಮಾಪಕರಾದ ಆನಂದಪ್ಪ ನಾಯ್ಕ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ತಮ್ಮ ಜಮೀನಿನ ಅಳತೆ ಕಾರ್ಯ ಮಾಡಿಕೊಡುವಂತೆ ಕೋರಿ ರೈತ ರುದ್ರೇಶ್ ಎಂಬುವವರು ಸರ್ವೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಕೆಲಸ ಮಾಡಿಕೊಡಲು ಅಧಿಕಾರಿಗಳು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಕುರಿತು ಖಚಿತ ಮಾಹಿತಿ ಹಾಗೂ ದೂರಿನ ಮೇರೆಗೆ ಹರಿಹರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ರೈತನಿಂದ ₹5,000 ಹಣವನ್ನು ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now