ವಯೋ ಸಹಜ ಕಾಯಿಲೆಯಿಂದ ಡಿ.ಬಿ ಚಂದ್ರೇಗೌಡ ನಿಧನ : ಇಂದಿರಾಗಾಂಧಿಗಾಗಿ ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದವರು..!

suddionenews
1 Min Read

ಬೆಂಗಳೂರು: ವಯೋ ಸಹಜ‌ ಕಾಯಿಲೆಯಿಂದಾಗಿ ಇಂದು ರಾಜ್ಯದ ರಾಜಕೀಯ ಮುತ್ಸದ್ದಿ ಡಿ ಬಿ ಚಂದ್ರೇಗೌಡ ನಿಧನರಾಗಿದ್ದಾರೆ. ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾದರಹಳ್ಳಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂದ್ರೇಗೌಡ ಅವರಿಗೆ 87 ವರ್ಷ ವಯಸ್ಸಾಗಿತ್ತು.

ಚಂದ್ರೇಗೌಡ ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯೆ ದಾದರಹಳ್ಳಿಯವರೆ. ರಾಜಕೀಯವಾಗಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. 1971 ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ, ಸಂಸದರಾಗಿದ್ದರು. 1977ರಲ್ಲಿ ಮತ್ತೆ ಸ್ಪರ್ಧಿಸಿ, ಜಯಬೇರಿ ಬಾರಿಸಿದ್ದರು. ಎರಡನೇ ಬಾರಿಗೂ ಚಿಕ್ಕಮಗಳೂರಿನಿಂದಾನೇ ಸಂಸದರಾಗಿ ಆಯ್ಕೆಯಾಗಿದ್ದರು. ಆ ಬಳಿಕ ಮುಂದಿನ ಲೋಕಸಭಾ ಚುನಾವಣೆ ಅಂದ್ರೆ 1978ರಲ್ಲಿ ಇಂದಿರಾಗಾಂಧಿಯವರಿಗಾಗಿ ಎಂಪಿ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು. ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಿ ಇಂದಿರಾ ಗಾಂಧಿಯವರು ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಟ್ಟಿದ್ದರು.

ಚಂದ್ರೇಗೌಡ ಅವರು ಮೂರು ಅವಧಿಯಲ್ಲಿ ಶಾಸಕರಾಗಿದ್ದರು. ಒಂದು ಬಾರಿ ವಿಧಾನ ಪರಿಷತ್ ಹಾಗೂ ಮೂರು ಬಾರಿ ಸಂಸತ್ ಸದಸ್ಯರಾಗಿದ್ದರು. ಮಾಜಿ ಸ್ಪೀಕರ್ ಆಗಿ‌ ಕೂಡ ಸೇವೆ ಸಲ್ಲಿಸಿದ್ದಾರೆ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮತ್ತು ಕರ್ನಾಟಕ ಸರ್ಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವಾರು ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸಿದ್ದಾರೆ.

 

ಇಂದು ವಯೋ ಸಹಜ ಕಾಯಿಲೆಯಿಂದ ಇಹಲೋಕ ತ್ಯಜಿಸಿದ್ದಾರೆ. ಮಧ್ಯಾಹ್ನ 2ರಿಂದ ಸಂಜೆ 6ರ ತನಕ ಮತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೂಡಿಗೆರೆಯ ಅಡ್ಯಾಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಬಳಿಕ ದಾದರಹಳ್ಳಿಯ ಪೂರ್ಣಚಂದ್ರ ಎಸ್ಟೇಟ್ ನಲ್ಲಿಯೇ ಅಂತ್ಯಸಂಸ್ಕಾರ ನೆರವೇರಲಿದೆ.

Share This Article
Leave a Comment

Leave a Reply

Your email address will not be published. Required fields are marked *